ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ತೋಟಗಾರಿಕೆ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಮತ್ತು ಸಿರಿ ತೋಟಗಾರಿಕೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಜ.23ರಿಂದ 26ರವರೆಗೆ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ತಿಳಿಸಿದ್ದಾರೆ.ಕದ್ರಿ ಉದ್ಯಾನವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಅವರು, ಜ.23ರ ಸಂಜೆ 4 ಗಂಟೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ.ಖಾದರ್ ಅವರ ಉಪಸ್ಥಿತಿ ಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಫಲಪುಷ್ಪ ಪ್ರದರ್ಶನ ಉದ್ಘಾಟಿಸುವರು ಎಂದರು.
ಫಲಪುಷ್ಪ ಆಕರ್ಷಣೆಯಾಗಿ ಪ್ರದರ್ಶನದ ವಂದೇ ಭಾರತ್ ರೈಲಿನ ಬೋಗಿಯ ಮಾದರಿಯನ್ನು ಹೂವುಗಳಿಂದ ನಿರ್ಮಿಸಲಾಗುವುದು. ಅಲ್ಲದೆ ಈಗಾಗಲೇಸುಮಾರು ಸುಮಾರು 30 ಬಗೆಯ ವಿವಿಧ ಜಾತಿಯ ಸುಮಾರು 15 ಸಾವಿರ ಹೂವಿನ ಕುಂಡಗಳನ್ನು ಸಿದ್ಧಪಡಿಸಲಾಗಿದ್ದು, ಇದನ್ನು ವಿಶೇಷ ರೀತಿಯಲ್ಲಿ ಜೋಡಿಸಲಾಗುವುದು.ರೈತರು ಬೆಳೆದಿರುವ ವಿವಿಧ ತರಕಾರಿ, ವಿಶಿಷ್ಟ ಬಗೆಯ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಸುಮಾರು 60 ಸಾವಿರ ಮಂದಿ ಈ ಫಲಪುಷ್ಪ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ಶಶಿಧರ್ ಹೆಚ್, ಕದ್ರಿ ಅಭಿವೃದ್ಧಿ ಸಮಿತಿ ಸದಸ್ಯರಾದ ಕೆ. ರಾಮ ಮುಗೋಡಿ, ಜಿ.ಕೆ. ಭಟ್, ಜಗನ್ನಾಥ್ ಗಾಂಭೀರ್, ಸಿರಿ ತೋಟಗಾರಿಕೆ ಸಂಘದ ಉಪಾಧ್ಯಕ್ಷ ಭಾರತಿ ನಿರ್ಮಲ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್ ಸಿ.ಎಂ., ಪ್ರದೀಪ್ ಡಿಸೋಜ, ಕೆ. ಪ್ರವೀಣ್, ಸಿರಿ ತೋಟಗಾರಿಕೆ ಸಂಘದ ಸದಸ್ಯ ವೈಕುಂಠ ಹೇರಳೆ, ಹರೀಶ್ಚಂದ್ರ ಅಡ್ಕ ಉಪಸ್ಥಿತರಿದ್ದರು.