ಕರಾವಳಿ ಕರ್ನಾಟಕ ಭಾಗದ ಸಾಂಪ್ರದಾಯಿಕ ಜನಪದ ಕ್ರೀಡೆಯಾದ ಕಂಬಳವನ್ನು ಉಳಿಸಬೇಕು ಮತ್ತು ಮುಂದಿನ ಪೀಳಿಗೆಗೆ ಪರಿಚಯಿಸಬೇಕ್ಕೆನ್ನುವ ಉದ್ದೇಶದಿಂದ ಜಯ-ವಿಜಯಜೋಡುಕರೆ ಕಂಬಳ ಸಮಿತಿ (ರಿ) ಜಪ್ಪಿನಮೊಗರು ಇವರ ನೇತೃತ್ವದಲ್ಲಿ ಮನ್ಕುತೋಟಗುತ್ತು ಮತ್ತು ನಾಡಾಜೆಗುತ್ತು ಕೀರ್ತಿಶೀಷ ಜೆ. ಜಯಗಂಗಾಧರ ಶೆಟ್ಟಿಯವರ ಸ್ಮರಣಾರ್ಥ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ ಫೆ ೧೪ ಮತ್ತು ೧೫ ರಂದು ನಡೆಯಲಿದೆ ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಸಮಿತಿಯಯ ಗೌರವಾಧ್ಯಕ್ಷರಾದ ಡಿ ವೇದವ್ಯಾಸ ಕಾಮತ್ ತಿಳಿಸಿದರು . . .
ಅವರು ನಗರದ ಓಷಲ್ ಪರ್ಲ್ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತಾನಾಡಿ , ಫೆ 14 ರಂದು ಬೆಳಿಗ್ಗೆ 8.30ಕ್ಕೆ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳು ಮಂಗಳೂರು ಇದರ ಸ್ಥಾಪಕಾಧ್ಯಕ್ಷರಾಗಿರುವ ಎಸ್. ಗಣೇಶ್ ರಾವ್ ಇವರ ಅಧ್ಯಕ್ಷತೆಯಲ್ಲಿ, ಅನಂತಪದ್ಮನಾಭ ಅಸ್ರಣ್ಣರ ಆಶೀರ್ವಚನದೊಂದಿಗೆ , ವೇದಮೂರ್ತಿ ಬ್ರಹ್ಮಶ್ರೀ ವಿಠಲದಾಸ್ ತಂತ್ರಿವರ್ಯರಿಂದ ಕಂಬಳವು ಉದ್ಘಾಟನೆಗೊಳ್ಳಲಿದೆ. ಸುಬ್ಬಯ್ಯ ಭಂಡಾರಿ ಪಟ್ಟದ ಯಜಮಾನರು ಜಪ್ಪುಗುಡ್ಡೆಗುತ್ತು ಹಾಗೂ ಇತರ ಅನೇಕ ಗಣ್ಯ ಅತಿಥಿಗಳು ಈ ಸಂದರ್ಭದಲ್ಲಿ ಇರಲಿದ್ದಾರೆ . .
ಸಾಯಂಕಾಲ ಗಂಟೆ 7.00ಕ್ಕೆ ಸಭಾ ಕಾರ್ಯಕ್ರಮವು ಶಾಸಕರಾದ ಡಿ. ವೇದವ್ಯಾಸ ಕಾಮತ್ ಇವರ ಘನ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಸಭಾ ಸಭಾಧ್ಯಕ್ಷರಾದ ಸನ್ಮಾನ್ಯ ಯು. ಟಿ. ಖಾದರ್, ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ , ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ , ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ , ಉದ್ಯಮಿಗಳಾದ ಡಾ. ಕೆ ಪ್ರಕಾಶ್ ಶೆಟ್ಟಿ , ಕಿಶೋರ್ ಆಳ್ವ ಸೇರಿದಂತೆ ವಿವಿಧ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತಿಯಲ್ಲಿ ಇರಲಿದ್ದಾರೆ .
ಕಳೆದ ಬಾರಿಯ ಕಂಬಳದಲ್ಲಿ ಸುಮಾರು 150 ಜೊತೆ ಕೋಣಗಳು ವಿವಿಧ ವಿಭಾಗಗಳಲ್ಲಿ ಭಾಗಹಿಸಿದ್ದು, ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಸಂಖ್ಯೆಯ ಕೋಣಗಳು ಭಾಗವಹಿಸುವ ನಿರೀಕ್ಷೆಯಿದೆ. ಕನಹಲಗೆ, ಹಗ್ಗ ವಿಭಾಗ, ನೇಗಿಲು ವಿಭಾಗ ಹಾಗೂ ಅಡ್ಡ ಹಲಗೆ ವಿಭಾಗಗಳಲ್ಲಿ ಸ್ಪರ್ಧೆಯು ನಡೆಯಲಿದ್ದು ವಿಜೇತ ಕೋಣಗಳಿಗೆ ಚಿನ್ನದ ಪದಕದೊಂದಿಗೆ ಶಾಶ್ವತ ಫಲಕವನ್ನು ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದರು .
ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿಯ ಸದಸ್ಯರಾದ ಸುಧಾಕರ ಶೆಟ್ಟಿ , ಅನಿಲ್ ಜೆ. ಶೆಟ್ಟಿ ಮನ್ಕುತೋಟಗುತ್ತು , ಟಿ. ಪ್ರವೀಣ್ ಚಂದ್ರ ಆಳ್ವ , ಸಂದೀಪ್ ಶೆಟ್ಟಿ , ಸಂತೋಷ್ ಆಳ್ವ , ವೀಣಾಮಂಗಳ , ನಿಶಾನ್ ಪೂಜಾರಿ ಸಹಿತ ಇನ್ನಿತ್ತರರು ಉಪಸ್ಥಿತರಿದ್ದರು .