ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ.
ಘಟನೆಯಿಂದ ಬಸ್‌ಗೆ ಭಾಗಶಃ ಹಾನಿ ಉಂಟಾಗಿದೆ, ಅತೀವೇಗದ ಚಾಲನೆಯಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುತ್ತಾರೆ.