ಕುದ್ಮುಲ್ ರಂಗರಾವ್ ಪುಣ್ಯಸ್ಮರಣೆ: ಬಾಬುಗುಡ್ಡೆಯಲ್ಲಿ ಬಿಜೆಪಿ ಎಸ್‌ಸಿ ಮೋರ್ಚಾದಿಂದ ಪುಷ್ಪ ನಮನ

ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ ಕುದ್ಮುಲ್ ರಂಗರಾವ್ ರವರ ಪುಣ್ಯಸ್ಮರಣೆಯ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಎಸ್ ಸಿ ಮೋರ್ಚಾ ವತಿಯಿಂದ ಬಾಬುಗುಡ್ಡೆಯಲ್ಲಿರುವ ಅವರ ಸಮಾಧಿಗೆ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ದಕ್ಷಿಣ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಹಿರಿಯ ನಾಯಕರಾದ ಮೋನಪ್ಪ ಭಂಡಾರಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ, ಮಂಡಲದ ಯುವ ಮೋರ್ಚಾ ಅಧ್ಯಕ್ಷರಾದ ಅಶ್ವಿತ್ ಕೊಟ್ಟಾರಿ, ನಿಕಟ ಪೂರ್ವ ಕಾರ್ಪೊರೇಟರ್ ಗಳಾದ ಭರತ್ ಕುಮಾರ್, ವೀಣಾ ಮಂಗಳ, ಸಂದೀಪ್ ಗರೋಡಿ, ಪಶ್ಚಿಮ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಮೋಹನ್ ಪೂಜಾರಿ, ದಕ್ಷಿಣ ಮಂಡಲದ ಕಾರ್ಯದರ್ಶಿ ರಘುವೀರ್ ಬಾಬುಗುಡ್ಡೆ, ಪ್ರಮುಖರಾದ ಅಮಿತ್ ರಾಜ್, ಜಯಕುಮಾರ್, ಸುರೇಖಾ ಹೆಗ್ಡೆ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!