ಮಂಗಳೂರು: 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ನ್ಯಾಯಾಲಯದ ಪ್ರಕರಣವೊಂದರಲ್ಲಿ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಕ್ಕಚೇರಿ ಉಳ್ಳಾಲ ನಿವಾಸಿ ಮಹಮ್ಮದ್‌ ಸಂಶೀರ್‌ ಎಂದು ಗುರುತಿಸಲಾಗಿದೆ.

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಆರೋಪಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದನು.ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು.

ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ಉಳ್ಳಾಲದ ಸಮೀಪ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 14 ವರ್ಷಗಳ ಬಳಿಕ ಆರೋಪಿಯ ಬಂಧನವಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!