ನೇಪಾಳದಿಂದ ಭಾರತದ ಮೇಲೆ ಸೈಬರ್ ದಾಳಿ: ನೂರಾರು ಕೋಟಿ ವಂಚನೆ ಪ್ರಕರಣ – ಮಂಗಳೂರಿನಲ್ಲಿ 11 ಆರೋಪಿಗಳ ಬಂಧನ

ಮಂಗಳೂರು ; ನೇಪಾಳದಲ್ಲಿ ಕುಳಿತು ಭಾರತೀಯರನ್ನು ಟಾರ್ಗೆಟ್ ಮಾಡಿ ನೂರಾರು ಕೋಟಿ ವಂಚನೆ ಮಾಡಿದ ತಂಡವನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯವರು ಒಟ್ಟು 11 ಜನ ಆರೋಪಗಳನ್ನು ಪೋಲಿಸರು ಬಂಧಿಸಿದ್ದಾರೆ.

ವಂಚಕರ ತಂಡದಲ್ಲಿ 16 ಭಾರತೀಯರು ಹಾಗೂ ಚೈನಾದ ವಂಚಕರಿದ್ದು, ನೇಪಾಳ ಪೊಲೀಸರು ಚೈನಾದ ವಂಚಕರನ್ನು ಪೋಲಿಸರು ದಸ್ತಗಿರಿ ಮಾಡಿದ್ದಾರೆ. 05 ಭಾರತೀಯ ಆರೋಪಿತರು ತಲೆಮರಿಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರೆದಿದೆ.

ಆರೋಪಿಗಳ ಮೊಬೈಲ್ ಫೋನ್ ಹಾಗೂ ಲ್ಯಾಪ್ ಟಾಪ್ ಗಳನ್ನು ಪರಿಶೀಲಿಸಿದಾಗ ಒಟ್ಟು 624 ಬ್ಯಾಂಕ್ ಖಾತೆಗಳ ವಿವರಗಳು ಕಂಡುಬಂದಿದ್ದು, ಬ್ಯಾಂಕ್ ಖಾತೆಗಳ ಮೇಲೆ ಒಟ್ಟು 4580 ಕ್ಕೂ ಹೆಚ್ಚು NCRP PORTAL ನಲ್ಲಿ ಪ್ರಕರಣಗಳು ದಾಖಲಾಗಿದೆ.ಇದರಲ್ಲಿ 1 ಬ್ಯಾಂಕ್ ಖಾತೆಯಲ್ಲಿ 167 ಕೋಟಿ ಹಣ ವರ್ಗಾವಣೆಯಾಗಿದ್ದು. ಸೆನ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ವಂಚಕರು ವಂಚನೆಗೆ ಬಳಸಿದ 10 ಬ್ಯಾಂಕ್ ಖಾತೆಗಳಲ್ಲಿ ಸುಮಾರು ರೂ 30,70,26,725 ಹಣ ವರ್ಗಾವಣೆ ಆಗಿದ್ದು, ಉಳಿದ 623 ಬ್ಯಾಂಕ್ ಖಾತೆಗಳ ವಿವರಣೆಗಳನ್ನು ಸಿಗಬೇಕಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!