ಸುರತ್ಕಲ್ ಬಳಿ ಕಾರು–ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಮಂಗಳೂರು: ಸುರತ್ಕಲ್ ಸಮೀಪ ಬೈಕೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.ಕಾರಿನ ರಭಸಕ್ಕೆ ಬೈಕ್‌ನಲ್ಲಿದ್ದ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಆತನಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದಲ್ಲಿ ಗಾಯಗೊಂಡ ಉಳಿದ ಇಬ್ಬರು ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣ ಮುಕ್ಕದ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.ಘಟನೆಯ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!