ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆಸಿ ಭಾರತೀಯರನ್ನು ಮತ್ತಷ್ಟು ಬಡತನಕ್ಕೆ ದೂಡುವ ಕಾಯ್ದೆಯೇ ವಿಬಿ-ಜಿ ರಾಮ್ ಜಿ : ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ

ಮಂಗಳೂರು:ಕೇಂದ್ರ ಸರಕಾರವು ಮನ್‌ರೇಗಾ ಸ್ವರೂಪ ಬದಲಾವಣೆ ಹಾಗೂ ಮಹಾತ್ಮಗಾಂಧೀಜಿ ಹೆಸರು ಬದಲಾವಣೆ ಮಾಡಿರುವುದನ್ನು ವಿರೋಧಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಸುಳ್ಯದಿಂದ ಮುಲ್ಕಿ ವರೆಗೆ 4 ದಿನಗಳ -ಕಿಮೀ ಪಾದಯಾತ್ರೆಯನ್ನು ಫೆ.9ರಿಂದ 12ರವರೆಗೆ ಆಯೋಜಿಸಲಾಗುವುದೆಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಹೇಳಿದರು .

ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕೇಂದ್ರ ಸರಕಾರವು ಸರಿಯಾದ ಚರ್ಚೆಯನ್ನೇ ನಡೆಸದೆ ತರಾತುರಿಯಲ್ಲಿ ವಿಬಿ ಜಿರಾಮ್‌ಜಿ ಕಾಯ್ದೆ ಜಾರಿಗೆ ತಂದಿದೆ.ಜನಪ್ರಿಯ ಕಾರ್ಯಕ್ರಮದಿಂದ ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆಸುವುದು ಮತ್ತು ಬಡವರನ್ನು ಮತ್ತಷ್ಟು ಬಡವರನ್ನಾಗಿ ಸುವುದೇ ಕೇಂದ್ರ ಸರಕಾರದ ನಿಲುವಾಗಿದೆ . ಈ ಕಾಯ್ದೆಯನ್ನು ಹಿಂಪಡೆಯುವವರೆಗೂ ಹೋರಾಟ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ , ಮಾಜಿ ಶಾಸಕ ಜೆಆ‌ರ್ ಲೋಬೊ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಖಂಡರಾದ ಪದ್ಮರಾಜ್‌ ಆ‌ರ್. ಪೂಜಾರಿ, ಶಶಿಧರ ಹೆಗ್ಡೆ, ಭಾಸ್ಕರ ಕೆ., ಶುಭೋದಯ ಆಳ್ವ, ನವಾಝ್, ಸುಹಾನ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!