ಸಾಹಿತಿ, ಸಂಘಟಕಿ, ಕವಯತ್ರಿ, ಶ್ರೀಮತಿ ಹಂಚಿಕಟ್ಟೇರ ಫ್ಯಾನ್ಸಿ ಮುತ್ತಣ್ಣ ಇವರಿಗೆ ಕವಿ ಕಾವ್ಯ ವಿಭೂಷಣ ಪ್ರಶಸ್ತಿ

ಮಂಗಳೂರು : ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ 22.02.2026.ಭಾನುವಾರ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಸರ್ವಾಧ್ಯಕ್ಷತೆಯಲ್ಲಿ, ಶ್ರೀಮದ್ ಎಡನೀರ್ ಶ್ರೀಗಳ ಹಾಗೂ ಗದಗ ಜಿಲ್ಲೆಯ ಶ್ರೀ ಶ್ರೀ ರಮೇಶ ಮಹಾಸ್ವಾಮಿ, ಗೋವಿನಾಳ ಇವರ ದಿವ್ಯ ಸಾನ್ನಿದ್ಯ ದಲ್ಲಿ ನಡೆಯಲಿರುವ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ. 2026…ರಲ್ಲಿ ಇವರೀಗೆ ಸಮ್ಮೇಳನದ ಪ್ರತಿಷ್ಠಿತ “ಕವಿ ಕಾವ್ಯ ವಿಭೂಷಣ “ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ ಎಂದು ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಸ್ಥಾಪಕ, ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ವೆಂಕಟ್ರಮಣ ಹೊಳ್ಳ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!