ಶ್ರವಣ ದೋಷದ ಬಗ್ಗೆ ಜಾಗೃತಿ ಅಗತ್ಯ -ಖಾದರ್ ಶಾ*ಶ್ರವಣ ತಪಾಸಣಾ ಶಿಬಿರಕ್ಕೆ ಚಾಲನೆ

ಮಂಗಳೂರು, ಫೆ.7; ಟೀಮ್ ಈಶ್ವರ್ ಮಲ್ಪೆ ಅವರ ವೈದ್ಯಕೀಯ ತಂಡ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ರ ಸಂಘದ ಸಹಯೋಗದೊಂದಿಗೆ ಮಂಗಳೂರು ಪ್ರೆಸ್ ಕ್ಲಬ್ ,ಪತ್ರಿಕಾ ಭವನ ಟ್ರಸ್ಟ್ ಸಹಕಾರ ದೊಂದಿಗೆ ‌‌‌ ಮಂಗಳೂರಿನ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡ ಎರಡು ದಿನಗಳ ಶ್ರವಣ ತಪಾಸಣಾ ಶಿಬಿರವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಖಾದರ್ ಶಾ ಶನಿವಾರ ಚಾಲನೆ ನೀಡಿ ಮಾತನಾಡುತ್ತಾ, ಶ್ರವಣ ದೋಷದ ಬಗ್ಗೆ ನಿರ್ಲಕ್ಷ್ಯ ಬೇಡ.ಸಮಾಜದಲ್ಲಿ ಸಾಕಷ್ಟು ಮಂದಿ ಶ್ರವಣ ದೋಷಗಳ ಕಾರಣದಿಂದ ತೊಂದರೆ ಅನುಭವಿಸುತ್ತಿದ್ದರೆ.ಈ ಬಗ್ಗೆ ಬಗ್ಗೆ ಜಾಗೃತಿ ಮೂಡಿ ಸುವ ಅಗತ್ಯವಿದೆ ಈ ನಿಟ್ಟಿನಲ್ಲಿ ಈ ರೀತಿಯ ತಪಾಸಣಾ ಶಿಬಿರಗಳು ಸಹಕಾರಿ ಎಂದರು.


ಟೀಮ್ ಈಶ್ವರ್ ಮಲ್ಪೆ ತಂಡದ ಸಂಚಾಲಕ ಲವ ಬಂಗೇರಾ ಮಾತನಾಡುತ್ತಾ,ರಾಜ್ಯದ ವಿವಿಧ ಕಡೆಗಳಲ್ಲಿ ಪತ್ರಕರ್ತರ ಸಹಕಾರದಿಂದ ಈ ರೀತಿಯ ಶ್ರವಣ ತಪಾಸಣಾ ಶಿಬಿರ ಗಳನ್ನು ನಡೆಸಲಾಗಿದೆ.ಸಮಾಜದಲ್ಲಿ ಶ್ರವಣ ದೋಷದ ಬಗ್ಗೆ ಅರಿವಿಲ್ಲದೆ ಹಲವಾರು ಮಂದಿಗೆ ಮಾನಸಿಕವಾಗಿ ದೈಹಿಕವಾಗಿ ಬಳಲುತ್ತಿರುವವರು ಇದ್ದಾರೆ.ಈ ಪೈಕಿ ಹಿರಿಯ ನಾಗರಿಕರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ.ಈ ಹಿನ್ನೆಲೆಯಲ್ಲಿ ಟೀಮ್ ಈಶ್ವರ್ ಮಲ್ಪೆ ತಂಡದಿಂದ ಉಚಿತವಾಗಿ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯ ಧನ ಕಾರ್ಯಕ್ರಮ ವಿತರಣೆ ನಡೆಯುತ್ತಿದೆ ಎಂದು ತಂಡದ ಸಂಚಾಲಕ ಲವ ಬಂಗೇರಾ ತಿಳಿಸಿದ್ದಾರೆ.


ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ,ಈಶ್ವರ್ ಮಲ್ಪೆ ಟೀಮ್‌ನ ಸಂಚಾಲಕರಾದ ಲವ ಬಂಗೇರಾ,ಶ್ರವಣ ತಜ್ಞರಾದ ಡಾ.ಅಂಕಿತಾ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ಸ್ವಾಗತಿಸಿದರು. ಉಪಾಧ್ಯಕ್ಷರಾದ ವಿಲ್ಫ್ರೆಡ್ ಡಿ ಸೋಜ, ರಾಜೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!