ಶಾರ್ಟ್ ಸರ್ಕ್ಯೂಟ್‌ನಿಂದ ಕಾರಿಗೆ ಬೆಂಕಿ.ತಪ್ಪಿದ ದೊಡ್ಡ ಅನಾಹುತ

ಮಂಗಳೂರು:ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದಕ್ಕೆ ಬೆಂಕಿ ತಗುಲಿ ಭಾಗಶಃ ಸುಟ್ಟು ಹೋಗಿರುವ ಘಟನೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಮೀಪ ನಡೆದಿದೆ.ಘಟನೆ ವೇಳೆ ಕಾರು ಚಾಲಕ ಸಮಯಕ್ಕೆ ಸರಿಯಾಗಿ ವಾಹನದಿಂದ ಇಳಿದುಕೊಂಡ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ. ಜನ ನಿಬಿಡ ಹಾಗೂ ವಾಹನ ದಟ್ಟಣೆಯ ಪ್ರದೇಶದಲ್ಲೇ ಘಟನೆ ಸಂಭವಿಸಿದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಘಟನೆಯಲ್ಲಿ ಕಾರಿನ ಅರ್ಧಭಾಗ ಸುಟ್ಟು ಹಾನಿಯಾಗಿದೆ.ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!