ಮಂಗಳೂರಿನಲ್ಲಿ ಫೆಬ್ರವರಿ 22 ರಂದು `ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತೋತ್ಸವ …. !

ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ (ರಿ ) ಪ್ರಸ್ತುತ ಪಡಿಸುವ ಉತ್ಕೃಷ್ಟ ಮಟ್ಟದ `ಸ್ತ್ರೀ’ ಪರಿಕಲ್ಪನೆಯ ವಿನೂತನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಫೆಬ್ರವರಿ 22 ರಂದು ಭಾನುವಾರ ಸಂಜೆ 5.00 ರಿಂದ ನಗರದ ಮಂಗಳೂರಿನ ಉರ್ವ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಗೀತ ಭಾರತಿ ಫೌಂಡೇಶನ್ ಕಾರ್ಯದರ್ಶಿಯಾದ ಡಾ. ಉಷಾಪ್ರಭಾ ಎನ್. ನಾಯಕ್ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಅಂದು ಸಂಜೆ ನಾಡಿನ ಪ್ರಖ್ಯಾತ ಕಲಾವಿದರಿಂದ ಉತ್ಕೃಷ್ಟ ಮಟ್ಟದ ‘ಶಾಸ್ತ್ರೀಯ ಗಾಯನ ಜುಗಲ್‌ಬಂಧಿ’ ಮತ್ತು ‘ವಯೋಲಿನ್ ಟ್ರಿಯೋ’ ಕಾರ್ಯಕ್ರಮಗಳು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಇದ್ದು, ಸಂಗೀತಪ್ರಿಯರಿಗೆ ಇದೊಂದು ಸಂಗೀತದ ರಸದೌತಣವಾಗಲಿದೆ ಎಂದುತಿಳಿಸಿದರು.

ಪೂರ್ವಾರ್ಧದಲ್ಲಿ ಯಲ್ಲಾಪುರದ ಕು.ವಿಭಾ ಹೆಗ್ಡೆ ಮತ್ತು ಬೆಂಗಳೂರಿನ ಕು.ಶಿವಾನಿ ಮಿರಾಜ್‌ಕ‌ರ್ ಇವರಿಂದ ಶಾಸ್ತ್ರೀಯ ಗಾಯನ ಜುಗಲ್‌ ಬಂಧಿ’ ಕಾರ್ಯಕ್ರಮ ನಡೆಯಲಿದ್ದು ಇದಕ್ಕೆ ಹಾರ್ಮೋನಿಯಂನಲ್ಲಿ ಮಂಗಳೂರಿನ ಕು.ಮೇಧಾ ಜಿ. ಭಟ್ ಮತ್ತು ಭೋಪಾಲ್‌ನ ಕು.ವಿಜೇತಾ ಹೆಗ್ಡೆ ಅವರು ತಬ್ಲಾದಲ್ಲಿ ಸಾಥ್ ನೀಡಲಿದ್ದಾರೆ ಎಂದರುಉತ್ತಾರಾರ್ಧದಲ್ಲಿ ಮುಂಬೈನ ಡಾ.ಸಂಗೀತ ಶಂಕರ್, ರಾಗಿಣಿ ಶಂಕರ್ ಮತ್ತು ನಂದಿನಿ ಶಂಕರ್ ಅವರಿಂದ ‘ವಯೋಲಿನ್ ಟ್ರಿಯೋ’ ಕಾರ್ಯಕ್ರಮ ನಡೆಯಲಿದೆ. ಇವರಿಗೆ ತಬ್ಲಾದಲ್ಲಿ ಮುಂಬೈನ ಅನುರಾಧ ಪಾಲ್ ಅವರು ಸಾಥ್ ನೀಡಲಿದ್ದಾರೆ. ಕಾರ್ಯಕ್ರಮಕ್ಕೆ ನಗರದ ಪ್ರಖ್ಯಾತ ಸಂಗೀತಾ ಗುರುಗಳಾದ ಬಸ್ತಿ ಕವಿತಾ ಶೆಣೈ, ವಿಭಾ ನಾಯಕ್ ಹಾಗೂ ಶ್ರೀಲತಾ ಪ್ರಭು ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು .

ಕಾರ್ಯಕ್ರಮಕ್ಕೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕೆನರಾ ಬ್ಯಾಂಕ್ ಮತ್ತು ಬೆಂಗಳೂರಿನ ಸೆಂಚುರಿ ಗ್ರೂಪ್‌ನ ಅಧ್ಯಕ್ಷರಾದ ‘ಡಾ.ಪಿ.ದಯಾನಂದ ಪೈ, ಕರ್ಣಾಟಕ ಬ್ಯಾಂಕ್ ಪ್ರೈ.ಲಿ, ಮುದ್ರ ಪಿಂಟ್ರರ್ಸ್ ಅವರು ಸಹ ಪ್ರಾಯೋಜಕತ್ವವನ್ನು ನೀಡಲಿದ್ದಾರೆ ಎಂದರು .ಪತ್ರಿಕಾಗೋಷ್ಠಿಯಲ್ಲಿ ಸಂಗೀತ ಭಾರತಿ ಫೌಂಡೇಶನ್ (ರಿ)ನ ಅಧ್ಯಕ್ಷರಾದ ಉಸ್ಸಾದ್ ರಫೀಕ್ ಖಾನ್, ಟ್ರಸ್ಟಿಗಳಾದ ಶ್ರೀ ಮುರುಳೀಧರ್ ಜಿ. ಶೆಣೈ, ಡಾ.ರಮೇಶ್ ಕೆ.ಜಿ ಹಾಗೂ ಸದಸ್ಯರಾದ ಶ್ರೀಮತಿ ಉಜ್ವಲ್ ಪ್ರದೀಪ್, ಶ್ರೀಮತಿ ಶ್ವೇತಾ ಸುವರ್ಣ ಮುಂತಾದವರು ಉಪಸ್ಥಿತರಿದ್ದರು

SHARE
Loading spinner

Leave a Reply

Your email address will not be published. Required fields are marked *

error: Content is protected !!