ಸಿಗರೇಟ್ ಸೇದುತ್ತಿದ್ದ ಯುವಕನ ಮೇಲೆ ಕ್ರಮ; NDPS ಕಾಯ್ದೆ ಅಡಿ ಪ್ರಕರಣ

ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ನಡೆದಿದೆ.ಸಾರ್ವಜನಿಕರಿಂದ ಬಂದ ಮಾಹಿತಿಯಂತೆ ಯುವಕನನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಉಪ ನಿರೀಕ್ಷಕರಾದ ಸುರೇಶ್ ಸಿ.ಟಿ ರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವಶಕ್ಕೆ ಪಡೆದಿದ್ದಾರೆ.

ಮುಹಮ್ಮದ್ ಮೋಹಾದ್ ಎಸ್, ಬಂಧಿತ ಯುವಕ. ತನ್ನ ಮನೆಗೆ ಹೋಗುವ ದಾರಿಯಲ್ಲಿ ಸಿಗರೇಟ್‌ ಸೇದಿರುವುದೆಂದು ತಿಳಿದು ಬಂದಿದೆ. ನಂತರ ಈ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 24/2026 ರಂತೆ ಕಲಂ 27(b) NDPS Act ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!