ಮಂಗಳೂರು:ಮನೆ ಕೆಲಸಕ್ಕೆ ತೆರಳಿದ್ದ ಮಹಿಳೆ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ನಗರದ ಹೊಯ್ಗೆ ಬಜಾರ್‌ನ ತಾಜ್ ಸೈಕಲ್ ಶಾಪ್ ಸಮೀಪ ವಾಸವಾಗಿದ್ದ ರೇಖಾ ಈಬಕ್ಕನವರ್ (40) ಅವರು ಫೆಬ್ರವರಿ 18ರಂದು ಮನೆಯಿಂದ ತೆರಳಿದ ಬಳಿಕ ಮರಳಿಲ್ಲ ಎಂದು ತಿಳಿದುಬಂದಿದೆ.ಈ ಸಂಬಂಧ ದಕ್ಷಿಣ ಪೊಲೀಸ್ ಠಾಣೆ ಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಕಾಣೆಯಾದವರ ವಿವರ:
ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದಾರೆ. ಕನ್ನಡ ಭಾಷೆಯಲ್ಲಿ ಮಾತನಾಡುತ್ತಾರೆ.ಕಾಣೆಯಾದ ಮಹಿಳೆಯ ಕುರಿತು ಯಾವುದೇ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ ದಕ್ಷಿಣ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.ಪೊಲೀಸರು ಮಹಿಳೆಯ ಪತ್ತೆಗೆ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.