ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ (ಗ್ರಾಮಾಂತರ) ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಶ್ರೀಮತಿ ಕೆ.ಎ. ಅಸ್ಮ ಹಾಗೂ ಶ್ರೀಮತಿ ಸವಿತಾ ಬರ್ಕಳ ಕೊಳ್ನಾಡು ಅವರನ್ನು ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಗೆ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡಿರುವ ಇವರಿಬ್ಬರ ಆಯ್ಕೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.
ಕೊಳ್ನಾಡು ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ಹಾಗೂ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿರುವ ಶ್ರೀಮತಿ ಕೆ.ಎ. ಅಸ್ಮ ಅವರು ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಮನ್ನಣೆ ಗಳಿಸಿದ್ದಾರೆ. ಸಮಾಜದ ವಿವಿಧ ವರ್ಗಗಳೊಂದಿಗೆ ಹೊಂದಾಣಿಕೆ ಸಾಧಿಸಿ ಕೆಲಸ ನಿರ್ವಹಿಸಿರುವ ಹಿನ್ನೆಲೆ ಅವರನ್ನು ಪಕ್ಷ ಗುರುತಿಸಿದೆ.
ಇದೇ ವೇಳೆ ಗ್ರಾಮ ಪಂಚಾಯಿತಿ ಸದಸ್ಯೆಯಾಗಿ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀಮತಿ ಸವಿತಾ ಬರ್ಕಳ ಕೊಳ್ನಾಡು ಅವರು ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಒಕ್ಕಲಿಗ ಸಮುದಾಯವನ್ನು ರಾಜಕೀಯವಾಗಿ ಮತ್ತಷ್ಟು ಸಕ್ರಿಯಗೊಳಿಸುವ ಹಿನ್ನಲೆಯಲ್ಲಿ ಅವರ ನೇಮಕ ಮಹತ್ವದ್ದಾಗಿದೆ ಎಂದು ಪಕ್ಷ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಅಲ್ಕಾ ಲಂಬಾ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೌಮ್ಯ ರೆಡ್ಡಿ ಅವರ ಮಾರ್ಗದರ್ಶನದಲ್ಲಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಈ ನೇಮಕಾತಿ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇವರಿಗೆ ಪಕ್ಷದಲ್ಲಿ ಗುರುತಿಸಿ ಹುದ್ದೆ ನೀಡಲು ಸಹಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್, ಮಾಜಿ ಸಚಿವರಾದ ಶ್ರೀ.ಬಿ.ರಮನಾಥ ರೈ,ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಉಷಾ ಅಂಚನ್ ಹಾಗೂ ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಐಡಾ ಸುರೇಶ್ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ. ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುವ ವಿಶ್ವಾಸವನ್ನು ಪಕ್ಷದ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ.ಇವರಿಗೆ ಇಂದು ಪುತ್ತೂರು ಬ್ಲಾಕ್ ಕಾಂಗ್ರೇಸ್ ಕಛೇರಿಯಲ್ಲಿ ನಡೆದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಆದೇಶ ಪತ್ರವನ್ನು ನೀಡಲಾಯಿತು.
Strendusmex is my go-to when I’m feeling lucky. It’s a solid option – nothing crazy, but reliable and fun. Check it out for yourself: strendusmex
Casinonovibet… not a bad option. The games are decent, and the site is easy to navigate. Maybe you’ll find your new favorite game here. Click to join: casinonovibet
Hoki108slottm, give it a try! Lots of slots to choose from and so far its pretty fun. It’s worth trying your luck! Wanna hit the jackpot? hoki108slottm