ಕೇರಳದಿಂದ ಅಕ್ರಮ ಕೆಂಪುಕಲ್ಲು ಸಾಗಾಟ: ವಿಟ್ಲ ಪೊಲೀಸರು 2 ಲಾರಿಗಳ ವಶ

ಬಂಟ್ವಾಳ: ಕೇರಳದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಕೆಂಪುಕಲ್ಲುಗಳನ್ನು ಸಾಗಿಸುತ್ತಿದ್ದ 2 ಲಾರಿಗಳನ್ನು ವಿಟ್ಲ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದೆ.

ಫೆ. 25ರಂದು ಮಧ್ಯಾಹ್ನ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ(ಕಾ&ಸು) ರಾಮಕೃಷ್ಣ ರವರಿಗೆ ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕ್ಕೆ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಬ್ಬಂದಿಗಳೊಂದಿಗೆ ಕಾರ್ಯಚರಣೆ ಮಾಡಿದಾಗ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ ಕೆಂಪುಕಲ್ಲುಗಳನ್ನು ತುಂಬಿಸಿಕೊಂಡು ಬರುತ್ತಿದ್ದ KA-21-C-0562 ಹಾಗೂ KA-12-A-2252 ನೇ ನೋಂದಣಿಯ 02 ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಚಾಲಕರಾದ ವಿಟ್ಲ ನಿವಾಸಿಗಳಾದ ಸಾಧಿಕ್ (25) ಮೊಹಮ್ಮದ್ (46) ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಈ ವೇಳೆ ವಿಚಾರಣೆ ನಡೆಸಿದಾಗ ಕೆಂಪು ಕಲ್ಲುಗಳನ್ನು ಕೇರಳದ ಧರ್ಮತ್ತಡ್ಕದಿಂದ ವೇಣು ಎಂಬವರು ತುಂಬಿಸಿ ಕಳುಹಿಸಿಕೊಟ್ಟಿರುವುದಾಗಿ ಹಾಗೂ ಈ ಬಗ್ಗೆ ಯಾವುದೇ ಪರವಾನಿಗೆ ಅಥವಾ ದಾಖಲಾತಿಗಳು ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಮುಂದಿನ ಕಾನೂನುಕ್ರಮಕ್ಕಾಗಿ ಲಾರಿಗಳ ಚಾಲಕರನ್ನು ವಶಕ್ಕೆ ಪಡೆದು, ಲೋಡ್ ಸಹಿತವಾಗಿ ಲಾರಿಗಳನ್ನು ಸ್ವಾಧೀನಪಡಿಸಿ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 49/2026, ಕಲಂ: 303(2) BNS 2023, ಕಲಂ. 4(1), 21 MMDR (MINES AND MINERALS REGULATION OF DEVELOPMENT) ACT 1957, ಕಲಂ: 3, 44 KARNATAKA MINOR MINERAL CONSISTENT RULE 1994 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!