ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಉದ್ಘಾಟನೆ, ಸಾಧಕರಿಗೆ ವಿಶೇಷ ಸನ್ಮಾನ

ಮಂಗಳೂರು: ಯಕ್ಷ ಸ್ನೇಹ ಕಲಾಪ್ರತಿಷ್ಠಾನ (ರಿ) ಕೊಂಚಾಡಿ ಇವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಲೆ ಅಷ್ಟಾಹ ಸಂಭ್ರಮ ಯಕ್ಷಮಂಜರಿ ಆದಿತ್ಯವಾರ ಮಧ್ಯಾಹ್ನ ಭಾರತ ಮಾತ ಪೂಜನೆಯೊಂದಿಗೆ ಪ್ರಾರಂಭಗೊಂಡಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾದ ಜಯಪ್ರಕಾಶ್ ಹೆಗ್ಡೆ ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಸಂಪರ್ಕ ಪ್ರಮುಖ್ ಪ್ರಸಾದ್ ಕೊಂಚಾಡಿ, ನಾಗಕನ್ನಿಕಾ ದೇವಸ್ಥಾನದ ಭಜನಾ ಮಂಡಳಿಯ ಅಧ್ಯಕ್ಷರಾದ ಸಾವಿತ್ರಿ ಕೋಟ್ಯಾನ್, ಇವರು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಯಕ್ಷ ಸ್ನೇಹ ಕಲಾ ಪ್ರತಿಷ್ಠಾನದ ಅಧ್ಯಕ್ಷರಾದ ಗೀತಾ ಲಕ್ಷ್ಮೀಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಂತರ ತಂಡದ ಸದಸ್ಯರಿಂದ ‘ಸುದರ್ಶನ ಗರ್ವಭಂಗ, ಯಕ್ಷಗಾನ ತಾಳಮದ್ದಳೆ ನಡೆಯಿತು. ಸಂಜೆ ನಡೆದ ಕಾರ್ಯಕ್ರಮದಲ್ಲಿ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಭಟ್ ಇವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮವು ಅಧಿಕೃತವಾಗಿ ಉದ್ಘಾಟನೆಗೊಂಡಿತು.

ಈ ಸಂದರ್ಭ ವೇದಿಕೆಯಲ್ಲಿ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ,ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕ ದೇವಸ್ಥಾನದ ಆಡಳಿತ ಮೋಕ್ತೇಸರರಾದ ಬಾಲಕೃಷ್ಣ ಕೊಟ್ಟಾರಿ, ಬಸವ ರತ್ನ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದರಾದ ರವಿ ಅಲೆವೂರಾಯ, ಸನಾತನ ನಾಟ್ಯಾಲಯದ ವಿದುಷಿ ಶ್ರೀಲತಾ ನಾಗರಾಜ್,ಯಕ್ಷ ಮಂಜಳಾ ಕದ್ರಿ ಇದರ ಸಂಚಾಲಕಿ ಪೂರ್ಣಿಮ ಪ್ರಭಾಕರ ರಾವ್ ಪೇಜಾವರ ಯಕ್ಷ ಸ್ನೇಹ ಕಲಾಪ್ರತಿಷ್ಠಾನದ ಗೌರವಾಧ್ಯಕ್ಷರಾದ ಮಧುಸೂದನ ಅಲೆವೂರಾಯ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉದಯವಾಣಿಯ ಸತೀಶ್ ಇರಾ, ವೀರರಾಣಿ ಅಬ್ಬಕ್ಕ ಗೌರವ ಪ್ರಶಸ್ತಿ ಪುರಸ್ಕೃತರಾದ ಗೀತಾ ಲಕ್ಷ್ಮೀಶ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಯಕ್ಷ ಮಂಜುಳ ಕದ್ರಿಯ ಸದಸ್ಯರು, ಪ್ರತಿಷ್ಠಾನದ ಪದಾಧಿಕಾರಿಗಳು, ಸದಸ್ಯರು, ಹಾಗೂ ನೂರಾರು ಕಲಾಭಿಮಾನಿಗಳು ಉಪಸ್ಥಿತರಿದ್ದರು

SHARE
Loading spinner

Leave a Reply

Your email address will not be published. Required fields are marked *

error: Content is protected !!