ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡುತ್ತೇವೆ ಎಂದು ಬೆದರಿಕೆ: ಎಫ್ ಐಆರ್ ದಾಖಲು

ಮಂಗಳೂರು : ಮಂಗಳೂರಿನ ಉಳ್ಳಾಲ ಮಸೀದಿ ಹತ್ತಿರ ಬಾಂಬ್‌ ಬ್ಲಾಸ್ಟ್‌ ಮಾಡುತ್ತೇನೆ ಎಂದು ಫೇಸ್‌ ಬುಕ್‌ನಲ್ಲಿ ಮೆಸೇಜ್ ಮಾಡಿದ ವ್ಯಕ್ತಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಬೇರೊಬ್ಬರು ಹಂಚಿಕೊಂಡ ಪೋಸ್ಟ್‌ಗೆ ‘ಶಂಕರ್‌11916’ ಎಂಬ ಖಾತೆಯನ್ನು ಬಳಸಿ ಈ ರೀತಿ ಕಮೆಂಟ್‌ ಮಾಡಲಾಗಿದೆ. ಮೊಹಮ್ಮದ್ ರಿಯಾಜ್ ಕಡಂಬು ಅವರು ಈ ಕುರಿತು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡು, ‘ಆರೋಪಿಯನ್ನು ಪೊಲೀಸರು ಆದಷ್ಟು ಬೇಗ ಬಂಧಿಸಬೇಕೆಂದು ತಿಳಿಸಿದ್ದಾರೆ . ಯಾವುದಕ್ಕೂ ಉಳ್ಳಾಲ ಮಸೀದಿಗಳ ಬಳಿ ಬಾಂಬ್ ಪತ್ತೆ ದಳವನ್ನು ಕಳುಹಿಸಿ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಬೇಕು‘ ಎಂದು ಒತ್ತಾಯಿಸಿದ್ದರು.

‘ಈ ಮಾಹಿತಿ ಹಂಚಿಕೊಂಡಿದ್ದಕ್ಕೆ ಧನ್ಯವಾದ ತಿಳಿಸಿರುವ ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್ ರೆಡ್ಡಿ, ‘ಉಳ್ಳಾಲ ಮಸೀದಿ ಬಳಿ ಬಾಂಬ್‌ ಸ್ಫೋಟಿಸುತ್ತೇನೆ ಎಂಬ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು ಅಪರಾಧ. ಉಳ್ಳಾಲ ಠಾಣೆಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಶೀಘ್ರವೇ ಬಂಧಿಸುತ್ತೇವೆ’ ಎಂದು ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!