22,600ರೂ ಲಂಚ ಪಡೆಯುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ದಾಳಿ

ಫಿರ್ಯಾದುದಾರರು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದು, 2025 ರ ಸಾಲಿನಲ್ಲಿ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದು, ಸದರಿ ಕೆಲಸದ ಬಿಲ್‌ಗೆ 4 ಪರ್ಸೆಂಟ್‌ನಂತೆ ಒಟ್ಟು ರೂ 22,600/- ಕೊಡಬೇಕು ಎಂಬುದಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಇಲ್ಲಿನ ಎಸ್.ಡಿ.ಎ ಸಂಪತ್ ರವರು ಫಿರ್ಯಾದುದಾರರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸಂಪತ್, ಎಸ್.ಡಿ.ಎ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಇವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.

ಈ ದಿನ ದಿನಾಂಕ 02.03.2026 ರಂದು ಸಂಪತ್, ಎಸ್.ಡಿ.ಎ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ರವರು ಫಿರ್ಯಾದುದಾರರಿಂದ ರೂ. 22,600/- (ಇಪ್ಪತ್ತೆರಡು ಸಾವಿರದ ಆರು ನೂರು), ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದರಿಯವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಈ ಕಾರ್ಯಾಚರಣೆಯನ್ನು ಶ್ರೀ ಬಿ.ಪಿ ದಿನೇಶ್ ಕುಮಾರ್, ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ಇವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಸುರೇಶ್ ಕುಮಾರ್.ಪಿ, ಡಾ. ಗಾನ ಪಿ ಕುಮಾರ್, ಪಿ.ಐ ಶ್ರೀಮತಿ ಭಾರತಿ ಜಿ, ರವರ ಉಸ್ತುವಾರಿಯಲ್ಲಿ ಪೊಲೀಸ್ ನಿರೀಕ್ಷಕರಾದ ಶ್ರೀ ಚಂದ್ರಶೇಖರ್ ಕೆ.ಎನ್. ರವರು ಸಿಬ್ಬಂದಿಗಳಾದ ರಾಜಪ್ಪ, ಮಹೇಶ್, ಆದರ್ಶ್, ರಾಮ ನಾಯ್ಕ, ಗಂಗಣ್ಣ, ಮಹಾದೇವ, ಪವಿತ್ರ, ಲಕ್ಷ್ಮೀ, ರವಿ ಪವಾರ್, ನವೀನ್ ಇವರ ನೇತ್ರ್ತ್ವದಲ್ಲಿ ತನಿಖೆ ನಡೆಯಲಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!