ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 31ನೇ ಬಿಜೈ ವಾರ್ಡ್ನ ಆನೆಗುಂಡಿ ಆಶ್ರಯ ರಸ್ತೆಯ ಬಳಿ ಹಾಗೂ ನಂದಗೋಕುಲ ಅಪಾರ್ಟ್ಮೆಂಟ್ ಸಮೀಪದ ರಾಜ್ಯ ಕಾಲುವೆಗೆ ತಡೆಗೋಡೆ ನಿರ್ಮಾಣ ಕಾಮಗಾರಿಗಾಗಿ ರೂ.30 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಅವರು ಇಂದು ಪಾಲಿಕೆಯ ಅಧಿಕಾರಿಗಳು ಹಾಗೂ ಪಕ್ಷದ ನಾಯಕರೊಂದಿಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.