ಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ ಕಾಮೆಂಟ್: ಭಟ್ಕಳ ಮೂಲದ ಆರೋಪಿ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ಉಳ್ಳಾಲ ಮಸೀದಿಗೆ ಬಾಂಬ್ ಸ್ಪೋಟದ ಕಾಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಭಟ್ಕಳ ‌ದೇವಿನಗರ ನಿವಾಸಿ ಶಂಕರ್‌ ಮಸ್ತಪ್ಪ ಮೊಗೆರ್ (35)‌ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ʼshankar11916ʼ ಎಂಬ Instagram ಖಾತೆಯಲ್ಲಿ “Support maadi bro ullal masjid hatra bomb blast madthini” ಎಂದು ಪೋಸ್ಟ್‌ ಮಾಡಿದ್ದು, ಇದು ವೈರಲ್‌ ಆಗಿತ್ತು. ಇದನ್ನು ಸಾಮಾಜಿಕ ಜಾಲತಾಣದ ಮೋನಿಟರಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ದೊಡ್ಡಮನಿ ಅವರು ಗಮನಿಸಿದ್ದು, ಅವರು ಈ ಬಗ್ಗೆ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಇನ್ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಕಾಮೆಂಟ್ ಮಾಡಿ ಧರ್ಮ ಧರ್ಮಗಳ ಮಧ್ಯೆ ವೈರತ್ವ, ದ್ವೇಷ ಹಾಗೂ ವೈಮನಸ್ಸು ಉಂಟು ಮಾಡಿ ಹಿಂಸೆಗೆ ಪ್ರಚೋದನೆ ನೀಡಿ ಜನರನ್ನು ಪರಸ್ಪರ ಎತ್ತಿ ಕಟ್ಟುವಂತೆ ಪ್ರಚೋದನಕಾರಿಯಾಗಿ ಕಾಮೆಂಟ್ ಮಾಡಿದ ಹಿನ್ನೆಲೆಯಲ್ಲಿ ಉಳ್ಳಾಲ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಮಂಗಳೂರು ನಗರದ 7 ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!