ಭಾರತೀಯ ಜನತಾ ಪಕ್ಷ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಜನಾ ಸಭೆ; ‘ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ–2026’ ಚಾಲನೆ

ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ – 2026 ರ ಭಾಗವಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಮಟ್ಟದ ಯೋಜನಾ ಸಭೆ ಇಂದು 04 ಮಾರ್ಚ್ 2026 ರಂದು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಉದ್ಘಾಟಿಸಿ ಮಾತಾನಾಡಿ ಪಕ್ಷದ ಸಿದ್ಧಾಂತ ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ನಮ್ಮ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ, ಶಿಸ್ತು ಮತ್ತು ರಾಷ್ಟ್ರಭಕ್ತಿಯೊಂದಿಗೆ ಸಾಗಲು ಈ ಪ್ರಶಿಕ್ಷಣ ವರ್ಗವು ಭದ್ರ ಬುನಾದಿಯಾಗಲಿದೆ ಎಂದರು.

ಹೊಸ ವಿಚಾರಗಳು, ಹೊಸ ಆಲೋಚನೆಗಳೊಂದಿಗೆ ನಮ್ಮ ‘ಫೌಂಡೇಶನ್’ಅನ್ನು ಭದ್ರಪಡಿಸಿಕೊಳ್ಳೋಣ. ಈ ತರಬೇತಿಯಲ್ಲಿ ಪಡೆದ ಜ್ಞಾನವನ್ನು ಕೇವಲ ಇಲ್ಲಿಗೆ ಸೀಮಿತಗೊಳಿಸದೆ, ನಮ್ಮ ಕ್ಷೇತ್ರಗಳಲ್ಲಿ ಜಾರಿಗೆ ತರಬೇಕಾಗಿದೆ, ಸಂಘಟನೆಯೇ ಶಕ್ತಿ, ಶಿಸ್ತೇ ಅದರ ಉಸಿರು ಎಂಬುದನ್ನು ನಾವು ಮರೆಯಬಾರದು.ವಿಶೇಷವಾಗಿ 2047ರ ಹೊತ್ತಿಗೆ ‘ವಿಕಸಿತ ಭಾರತ’ ನಿರ್ಮಾಣದ ಗುರಿಯನ್ನು ತಲುಪಲು ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಪ್ರಶಿಕ್ಷಣ ಮಹಾಭಿಯಾನ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿ ಸಂಘಟನೆಯಲ್ಲಿ ಯಾವುದೇ ರಾಜಿ ಇಲ್ಲದೆ ಬದ್ಧತೆಯೊಂದಿಗೆ ಕೆಲಸ ಮಾಡಬೇಕು ಎಂದರು.ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಅಧ್ಯಕ್ಷತೆ ವಹಿಸಿದ್ದರು, ಪಂಡಿತ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ರಾಜ್ಯ ಸಹ ಸಂಚಾಲಕರಾದ ವಿಕಾಸ್ ಪುತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಅರ್ವಾರ ಮಾಹಿತಿ ನೀಡಿದರು.

ಶಾಸಕರಾದ ವೇದವ್ಯಾಸ ಕಾಮತ್, ಭಾಗೀರಥಿ ಮುರುಳ್ಯ, ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಉಪಸ್ಥಿತರಿದ್ದರು. ಸೀತಾರಾಮ ಬೆಳಾಲು ಸ್ವಾಗತಿಸಿ, ಡಾ ಮಂಜುಳಾ ರಾವ್ ಕಾರ್ಯಕ್ರಮ ನಿರೂಪಿಸಿದರು, ಅರುಣ್ ಶೇಟ್ ವಂದೇಮಾತರಂ ಹಾಡಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!