ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 117ನೇ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ ಮಾರ್ಚ್ 5ರಂದು ಬೆಳಿಗ್ಗೆ 11:30ಕ್ಕೆ ಮ್ಯಾಪ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮ್ಯಾಪ್ಸ್ ಕಾಲೇಜು ಮಂಗಳೂರಿನ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಕೇಂದ್ರ ಮಂಗಳೂರಿನ ಔಷಧ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ್ ಹಾಗೂ ವಿಜಯ ಕರ್ನಾಟಕ ದೈನಿಕದ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಹಾಗೂ ಕಾದಂಬರಿಗಾರರಾದ ಡಾ. ಪ್ರಭಾಕರ ನೀರುಮಾರ್ಗ, ತುಳು ಪರಿಷತ್ ಮಂಗಳೂರು ಅಧ್ಯಕ್ಷರಾದ ಶುಭೋದಯ ಆಳ್ವ ಹಾಗೂ ನಿವೃತ್ತ ಪ್ರಶಸ್ತಿ ವಿಜೇತ ಶಿಕ್ಷಕಿ ಮತ್ತು ಲೇಖಕಿ ಸುಧಾ ನಾಗೇಶ್ ಗೌರವ ಉಪಸ್ಥಿತರಿರುತ್ತಾರೆ. ಕಾರ್ಯಕ್ರಮವನ್ನು ಶಿಕ್ಷಕಿ ಹಾಗೂ ಲೇಖಕಿ ಸುರೇಖಾ ಯಾಳವಾರ ನಿರೂಪಿಸಲಿದ್ದಾರೆ ಎಂದು ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.