ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ವಶಕ್ಕೆ

ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ ಎಸ್ಕೇಪ್ ಆಗಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಮಹಮ್ಮದ್ ಶಫೀಕ್, ಎಂಬತನನ್ನು ಬಂಧಿಸಲಾಗಿದೆ.

ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಎಂಬವರು ಮಾರ್ಚ್ 2ರ ಮಧ್ಯಾಹ್ನ ಪುತ್ತೂರಿನಿಂದ ಕೂರ್ನಡ್ಕಕ್ಕೆ ತನ್ನ ಕಾರಿನಲ್ಲಿ ಹೋಗುತ್ತಿದ್ದರು. ಆಗ ಪುತ್ತೂರು ರಿಲ್ಯಾನ್ಸ್ ಮಾಲ್ ಬಳಿ, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಅಪರಿಚಿತ ಸುಮಾರು 30 ವರ್ಷ ಪ್ರಾಯದ ಯುವಕನೊಬ್ಬ ಹಕೀಂ ಅವರ ಕಡೆಗೆ ಪಿಸ್ತೂಲನ್ನು ತೋರಿಸಿ ಗುಂಡು ಹೊಡೆಯಲು ಪ್ರಯತ್ನಿಸಿ ಬೆದರಿಸಿದ್ದಾನೆ.

ಈ ವೇಳೆ ಹಕೀಂ ಹಾಗೂ ಇತರರು ಸೇರಿ ಆತನನ್ನು ಹಿಡಿಯಲು ಹೋದಾಗ ಆತನು ಮೋಟಾರು ಸೈಕಲ್ ನೊಂದಿಗೆ ಓಡಿ ಪರಾರಿಯಾಗಿದ್ದ ಎಂದು ದೂರುದಾರರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂಬರ್: 26/2026, ಕಲಂ: 351(3) BNS 2023 ಮತ್ತು ಕಲಂ: 3, 25, 27 ಶಸ್ತ್ರಾಸ್ತ್ರ ಕಾಯ್ದೆ 1959 ಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿತನಾದ ಪುತ್ತೂರು ನಿವಾಸಿ ಮಹಮ್ಮದ್ ಶಫಿಕ್ (19) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಯುತ್ತಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!