ಮಂಗಳೂರು: ಶ್ರೀ ಮಂಗಳಾದೇವಿ ಕರಸೇವಕರು ಬೋಳಾರ ಟ್ರಸ್ಟ್ ಮತ್ತು ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮಂಡಳಿಯ ಸಹಯೋಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮಟ್ಟದ ನಲಿಕೆದ ಭಜನೆ ಕುಣಿತ ಭಜನಾ ಸ್ಪರ್ಧೆಯು ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಭಾರತೀಯ ರಾಷ್ಟ್ರೀಯ ಮಹಿಳಾ ಕಬಡ್ಡಿ ತಂಡದ ಭರವಸೆಯ ಆಟಗಾರ್ತಿ ಹಾಗೂ ಢಾಕಾದಲ್ಲಿ ನಡೆದ ಮಹಿಳಾ ವಿಶ್ವಕಪ್ ಕಬಡ್ಡಿ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಜಿಲ್ಲೆಯ ಹೆಮ್ಮೆಯ ಕ್ರೀಡಾಪಟು ಧನಲಕ್ಷ್ಮಿ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಶ್ರೀ ಮಂಗಳಾದೇವಿ ಕರಸೇವಕರು ಬೋಳಾರ ಟ್ರಸ್ಟ್ನ ಗೌರವಾಧ್ಯಕ್ಷರಾದ ಜೆಪ್ಪು ಚಿದಾನಂದ ನಾಯ್ಕ್ (ದೋಹಾ, ಕತಾರ್) ಹಾಗೂ ಕತಾರ್ ತುಳು ಒಕ್ಕೂಟದ ಸಹಯೋಗದಲ್ಲಿ ನೀಡಲಾದ ಐದು ಲಕ್ಷ ರೂಪಾಯಿ ನಗದು ಪುರಸ್ಕಾರ ನೀಡಿ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಟ್ರಸ್ಟ್ ವತಿಯಿಂದ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರನ್ನು ಕೂಡ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಯಕ್ಷ ಧ್ರುವ ಪಟ್ಲ ಮಂಗಳೂರು ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ, ಚಲನಚಿತ್ರ ನಿರ್ಮಾಪಕ ರವಿ ರೈ ಕಳಸ, ಚಿತ್ರ ನಟ ಶನೀಲ್ ಗೌತಮ್, ಶ್ರೀ ಮಂಗಳಾದೇವಿ ದೇವಸ್ಥಾನದ ಆನುವಂಶಿಕ ಮೊಕ್ತೇಸರರಾದ ಜಿ. ರಘುರಾಮ ಉಪಾಧ್ಯಾಯ, ಎಸ್. ಹರೀಶ್ ಐತಾಳ್, ಎಂ. ಅರುಣ್ ಐತಾಳ್, ಬೋಳಾರ ಹಳೇಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಅಶೋಕ್ ಕುಮಾರ್ ಬಿ., ಮಾಜಿ ಸದಸ್ಯ ವೇಣುಗೋಪಾಲ ಪುತ್ರನ್, ಮ.ನ.ಪಾ ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳಾದೇವಿ ಕರಸೇವಕರು ಬೋಳಾರ ಟ್ರಸ್ಟ್ನ ಅಧ್ಯಕ್ಷ ದಯಾನಂದ ಬೋಳಾರ್, ಗೌರವಾಧ್ಯಕ್ಷ ಸೀತಾರಾಮ ಎ., ಸ್ಥಾಪಕಾಧ್ಯಕ್ಷ ಸಂತೋಷ್ ಶೆಟ್ಟಿ ಬೋಳಾರ, ಸದಸ್ಯರಾದ ಲೋಹಿತ್ ಶೆಟ್ಟಿ, ರಿತೇಶ್ ಯೆಯ್ಯಾಡಿ, ವಿಜೇಶ್ ಬೋಳಾರ, ಚಂದ್ರಶೇಖರ ಉಡುಪಿ ಮತ್ತಿತರರು ಉಪಸ್ಥಿತರಿದ್ದರು.