ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತನನ್ನು Nawaz ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2014ರ ಅ.ಕ್ರ. 375/2014ರಡಿ ಐಪಿಸಿ ಕಲಂ 393, 398 ಹಾಗೂ 34ರಡಿ ಪ್ರಕರಣ ದಾಖಲಾಗಿತ್ತು.
ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ದಸ್ತಗಿರಿ ನಡೆಸಿದೆ.
ಬಂಧಿತನನ್ನು ಮಂಗಳೂರು ನಗರದ 7ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಈತನಿಗೆ ಮಾರ್ಚ್ 25, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.