ಮಂಗಳೂರಿನಲ್ಲಿ ರಾಮೋತ್ಸವಕ್ಕೆ ಚಾಲನೆ: ಕದ್ರಿ ಮೈದಾನದಲ್ಲಿ ಚಪ್ಪರ ಮುಹೂರ್ತ

ಮಂಗಳೂರು: ವಿಶ್ವ ಹಿಂದೂ ಪರಿಷತ್ ಹಾಗೂ ರಾಮೋತ್ಸವ ಸಮಿತಿ ಮಂಗಳೂರು ವತಿಯಿಂದ ಮಾರ್ಚ್ 26ರಿಂದ 29ರವರೆಗೆ ನಡೆಯಲಿರುವ 25ನೇ ವರ್ಷದ ಶ್ರೀ ರಾಮೋತ್ಸವದ ಅಂಗವಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕದ್ರಿ ಮೈದಾನದಲ್ಲಿ ನೆರವೇರಿತು.

ಈ ಕಾರ್ಯಕ್ರಮವು ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ. ಕೃಷ್ಣ ಅಡಿಗ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನಡೆಯಿತು.

ಈ ಸಂದರ್ಭದಲ್ಲಿ ರಾಮೋತ್ಸವ ಸಮಿತಿ ಅಧ್ಯಕ್ಷ ಸುನಿಲ್ ಆಚಾರ್, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ್, ಶರಣ್ ಪಂಪವೆಲ್, ಶಿವಾನಂದ ಮೆಂಡನ್, ಮನೋಹರ್ ಸುವರ್ಣ, ಗೋಪಾಲ್ ಕುತ್ತಾರ್, ಸಂತೋಷ್ ಕದ್ರಿ, ಚೇತನ್ ಬಿಕರ್ನಕಟ್ಟೆ, ನಾಗೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮಾರ್ಚ್ 26ರಿಂದ ಆರಂಭಗೊಳ್ಳಲಿರುವ ರಾಮೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತರಲ್ಲಿ ಹಬ್ಬದ ಸಂಭ್ರಮ ಮನೆಮಾಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!