ಮಂಗಳೂರು :ವಿಧಾನಸೌಧದ ಮುಖ್ಯ ದ್ವಾರವನ್ನು ರಾಜ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾರ್ಚ್ 25 ರಂದು ಉದ್ಘಾಟಿಸಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ
ಅವರು ಮಂಗಳೂರಿನ ಜೆಪ್ಪಿನಮೊಗರು ಎಂ ಎಸ್ ಗಾರ್ಡನ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಈ ಪ್ರವೇಶ ದ್ವಾರವು ಅತ್ಯಂತ ಸುಂದರವಾದ ಕಲಾಕೃತಿಯ ಕೆತ್ತನೆಗಳೊಂದಿಗೆ ಕರ್ನಾಟಕ ಶೈಲಿಯನ್ನು ಹೊಂದಿದ್ದು, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ಮತ್ತು ಲೋಕೋಪಯೋಗಿ ಇಲಾಖೆ ಮೂಲಕ ಅಭಿವೃದ್ಧಿಪಡಿಸಲಾಗಿದೆ ಎಂದು ತಿಳಿಸಿದರು .
ವಿಧಾನಸೌಧದ ಭವ್ಯ ಮೆಟ್ಟಿಲುಗಳ ಬಳಿ ಮತ್ತು ಹೈಕೋರ್ಟ್ ಕಡೆಯಿಂದ ಪ್ರವೇಶ ದ್ವಾರಗಳನ್ನು ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ ಟೆಂಡರ್ ಕರೆಯಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ವಿಧಾನಸೌಧಕ್ಕೆ ಭಾಗಶಃ ವಿದ್ಯುತ್ ಪೂರೈಸುವ ಸೌರ ಫಲಕಗಳನ್ನು ಸಹ ಮಾರ್ಚ್ 25 ರಂದು ಉದ್ಘಾಟಿಸಲಾಗುವುದು ಎಂದು ಹೇಳಿದರು.