ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವವು ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಉಪಸ್ಥಿತರಿರಲಿದ್ದಾರೆ.
ಇದೇ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.