17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬರ್ಕೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ರಿಯಾಜ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ 2009ರಲ್ಲಿ (ಅಪರಾಧ ಕ್ರಮಾಂಕ: 15/2009) ಕಾಪಿರೈಟ್ ಕಾಯ್ದೆಯ ಕಲಂ 52(a) ಮತ್ತು 63ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿತನು ದೀರ್ಘಕಾಲ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ, 2016ರಲ್ಲಿ ನ್ಯಾಯಾಲಯವು ಪ್ರಕರಣವನ್ನು ಎಲ್‌ಪಿ‌ಸಿ 79/2016 ಎಂದು ಪರಿವರ್ತಿಸಿತ್ತು. ಇದೀಗ ಸುಮಾರು 17 ವರ್ಷಗಳ ಬಳಿಕ, ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ದೀರ್ಘಕಾಲದಿಂದ ಬಾಕಿ ಉಳಿದಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿರುವುದು ಪೊಲೀಸ್ ಇಲಾಖೆಯ ಪ್ರಮುಖ ಸಾಧನೆಯಾಗಿ ಪರಿಗಣಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!