ಕುಂಜತ್ತಬೈಲ್‌ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ

ಮಂಗಳೂರು: ನಗರದ ಕುಂಜತ್ತಬೈಲ್‌ನ ಕೊಂರ್ಗಿಬೈಲ್ ಅರ್ತಿವೊಡಲು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 6ರಿಂದ 12ರವರೆಗೆ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಆಶಿಕ್ ಬಲ್ಲಾಳ್ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಏಪ್ರಿಲ್ 12ರಂದು (ಭಾನುವಾರ) ಪೂರ್ವಾಹ್ನ 8:20ರಿಂದ 10:00 ಗಂಟೆಯೊಳಗಿನ ವೃಷಭ ಲಗ್ನದ ಸುಮುಹೂರ್ತದಲ್ಲಿ ನೆರವೇರಲಿದೆ ಎಂದು ಹೇಳಿದರು.

ಈ ಮಹೋತ್ಸವದ ಅಂಗವಾಗಿ ಏಪ್ರಿಲ್ 6ರಿಂದವೇ ವೇದಮೂರ್ತಿ ಕುಡುಪು ನರಸಿಂಹ ತಂತ್ರಿ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭಗೊಳ್ಳಲಿದ್ದು, ಅದರೊಂದಿಗೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಆಡಳಿತ ಮೊಕೇಸ್ತರಾದ ಡಾ ನರೇಶ್ ರೈ ದೆಪ್ಪುಣಿಗುತ್ತು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಿಠಲ ಆಳ್ವ ಹಾಗೂ ಸದಸ್ಯ ಜಗದೀಶ್ ಶೆಟ್ಟಿ ಮುರ ಸೇರಿದಂತೆ ಇತರರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!