ಬೆಂಗ್ರೆ ವಾರ್ಡ್‌ನಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 60ನೇ ಬೆಂಗ್ರೆ ವಾರ್ಡ್‌ನ ಪಡುಹೊಯ್ಗೆ ಮೊಗವೀರ ಗ್ರಾಮ ಸಭಾ ಬೆಂಗರೆ (ರಿ.) ವ್ಯಾಪ್ತಿಯ ಸ್ಯಾಂಡ್ ಪಿಟ್ ಬೆಂಗರೆ ಬಳಿ ವಿಶೇಷ ಅನುದಾನದಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗೆ ಇತ್ತೀಚೆಗೆ ಭೂಮಿ ಪೂಜೆ ನೆರವೇರಿತು. ಕಾರ್ಯಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವ ವಹಿಸಿದ್ದರು.

ಭೂಮಿ ಪೂಜೆ ಬಳಿಕ ಮಾತನಾಡಿದ ಅವರು, ಸ್ಥಳೀಯರ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ ಅಗತ್ಯ ಅನುದಾನವನ್ನು ಸಂಗ್ರಹಿಸಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ನಿತಿನ್ ಕುಮಾರ್, ವಿನೋದ್ ಮೆಂಡನ್, ಅನಿಲ್, ಕಿಶೋರ್ ಕೊಟ್ಟಾರಿ, ಸುರೇಂದ್ರ ಪಾಂಗಳ್, ಗಂಗಾಧರ, ಸಂಜಯ್ ಸುವರ್ಣ, ಧನಂಜಯ ಪುತ್ರನ್, ಚೇತನ್ ಬೆಂಗ್ರೆ, ವಿಥುನ್, ವಾಸು ಸುವರ್ಣ, ಸುಂದರ ಸಾಲ್ಯಾನ್, ಸುಕುಮಾರ, ಜೀವನ್ ಖಾರ್ವಿ ಸೇರಿದಂತೆ ಸ್ಥಳೀಯ ನಿವಾಸಿಗಳು ಹಾಗೂ ವಾರ್ಡ್ ಕಾರ್ಯಕರ್ತರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!