ಮಂಗಳೂರಿನ ಅತ್ತಾವರದಲ್ಲಿರುವ ಐತಿಹಾಸಿಕ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 19ರಿಂದ 23ರವರೆಗೆ ಬ್ರಹ್ಮಕಲಶೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಅಯ್ಯಪ್ಪ ಸಮಿತಿಯ ಅಧ್ಯಕ್ಷರಾದ ಸೂರಜ್ ರಾಘವನ್ ತಿಳಿಸಿದರು .
ಅವರು ನಗರದ ಪತ್ರಿಕಾಭವದನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಉತ್ಸವದ ಅಂಗವಾಗಿ ಏಪ್ರಿಲ್ 19ರಂದು ಮಂಗಳಾ ದೇವಿ ದೇವಸ್ಥಾನದಿಂದ ಹೊರಕಾಣಿಕೆ ಮೆರವಣಿಗೆ ಹೊರಡಲಿದ್ದು , ಅದು ಅತ್ತಾವರದ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ತಲುಪಲಿದೆ. ಐದು ದಿನಗಳ ಕಾಲ ಭಕ್ತಿ ಮತ್ತು ಶ್ರದ್ಧೆಯಿಂದ ವಿವಿಧ ಪೂಜಾ ವಿಧಿಗಳು, ಭಜನಾ ಸಂಕೀರ್ತನೆ ಹಾಗೂ ಧಾರ್ಮಿಕ ಸಭೆಗಳು ನಡೆಯಲಿವೆ ಎಂದರು.
ಏಪ್ರಿಲ್ 23ರಂದು ಬೆಳಿಗ್ಗೆ 7:30ಕ್ಕೆ ನೂತನ ಗರ್ಭಗೃಹದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಈ ಮಹತ್ವದ ಧಾರ್ಮಿಕ ವಿಧಿಯನ್ನು ಪಂದಳ ರಾಜವಂಶಸ್ಥರಾದ ಶ್ರೀ ನಾರಾಯಣ ವರ್ಮ ತಂಬೂರನ್ ಅವರ ಉಪಸ್ಥಿತಿಯಲ್ಲಿ ವೇದಮೂರ್ತಿ ಬ್ರಹ್ಮಶ್ರೀ ಕುಡುಪು ಕೃಷ್ಣರಾಜ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದರು .
ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಕಲಶ ಸಮಿತಿಯ ಕಾರ್ಯಧ್ಯಕ್ಷರಾದ ಮುರಳಿಧರ್,ಕಾರ್ಯಧ್ಯಕ್ಷರಾದ ಗೋಕುಲ್ ದಾಸ್,ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾದ ರಾಜರತ್ನ ಸನೀಲ್,ಗೌರವ ಕಾರ್ಯದರ್ಶಿ ಜನಾರ್ಧನಗ ಅತ್ತಾವರ್, ಸಮಿತಿಯ ಉಪಾಧ್ಯಕ್ಷೆ ಡಾ.ಮಾಲತಿ ಶೆಟ್ಟಿ ಮಾಣೂರು ಹಾಗೂ ದೇವಸ್ಥಾನ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಕ್ಷಿತಿ ಉಪಸ್ಥಿತರಿದ್ದರು.