ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಫಾದರ್ ಮೆಲ್ವಿನ್ ಪಿಂಟೋ ನಿಧನ

ಮಂಗಳೂರು: ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಫಾದರ್ ಮೆಲ್ವಿನ್ ಪಿಂಟೋ ಅವರ ನಿಧನದ ಸುದ್ದಿ ಶಿಕ್ಷಣ ಕ್ಷೇತ್ರಕ್ಕೆ ತುಂಬಾ ದುಃಖಕರವಾಗಿದೆ ಎಂದು ಮಾಜಿ ಸಚಿವ ಬಿ. ರಾಮನಾಥ ರೈ ತಿಳಿಸಿದ್ದಾರೆ.

ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಸೇವೆಯನ್ನು ಸ್ಮರಿಸಿದ ರಾಮನಾಥ ರೈ, ಅವರ ಅಗಲಿಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ. ಫಾ. ಮೆಲ್ವಿನ್ ಪಿಂಟೋ ಅವರ ಆತ್ಮೀಯತೆ, ಸರಳತೆ ಮತ್ತು ವಿದ್ಯಾರ್ಥಿಗಳ ಮೇಲಿನ ಅಪಾರ ಪ್ರೀತಿ ಎಂದಿಗೂ ಮರೆಯಲಾಗದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅನೇಕ ವಿದ್ಯಾರ್ಥಿಗಳ ಜೀವನಕ್ಕೆ ದಾರಿ ತೋರಿದ ಮಾರ್ಗದರ್ಶಕರಾಗಿದ್ದ ಅವರು, ತಮ್ಮ ಸೇವೆ ಮತ್ತು ಸಾಧನೆಗಳ ಮೂಲಕ ಸದಾ ಸ್ಮರಣೀಯರಾಗಿರುತ್ತಾರೆ ಎಂದೂ ತಿಳಿಸಿದ್ದಾರೆ.

ಇದೇ ವೇಳೆ, ಭಗವಂತರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಸ್ಥರು ಮತ್ತು ಅನುಯಾಯಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!