ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ

ಮಂಗಳೂರು: ಬಿಜೆಪಿಯ ಹಿರಿಯ ನಾಯಕ ಹಾಗೂ ಮೊಗವೀರ ಸಮುದಾಯದ ಮುಖಂಡರಾಗಿದ್ದ ರಾಮಚಂದ್ರ ಬೈಕಂಪಾಡಿ (75) ಅವರು ಮಂಗಳವಾರ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರು ಎಳೆದಿದ್ದಾರೆ.

ಮೊಗವೀರ ಸಮುದಾಯದಲ್ಲಿ ಹಿರಿಯ ರಾಜಕೀಯ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ಮೀನುಗಾರರಿಗೆ ಸಮಸ್ಯೆ ಎದುರಾದಾಗ ತಕ್ಷಣ ಸ್ಪಂದಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದರು. ಹಲವು ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಾಮಾಜಿಕ ಕಳಕಳಿಯುಳ್ಳ ನಾಯಕರೆಂದು ಹೆಸರು ಗಳಿಸಿದ್ದರು.

ಮಂಗಳೂರಿನ ಪ್ರಮುಖ ರಂಗಕರ್ಮಿ, ಸಾಹಿತಿ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದ ಅವರು, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2021ರಲ್ಲಿ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು. ರಾಜ್ಯ ಬಿಜೆಪಿ ಕಾರ್ಯಕಾರಿ ಸದಸ್ಯರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.

ರಾಮಚಂದ್ರ ಬೈಕಂಪಾಡಿ ಅವರ ನಿಧನಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು, ಮೀನುಗಾರ ಸಂಘಟನೆಗಳು ಹಾಗೂ ವಿವಿಧ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. “ಕರಾವಳಿಯ ಮೀನುಗಾರರ ಹಿತರಕ್ಷಣೆ ಮತ್ತು ಪರಿಸರ ಕಾಳಜಿಯ ದೃಢ ಧ್ವನಿಯೊಂದನ್ನು ನಾವು ಕಳೆದುಕೊಂಡಿದ್ದೇವೆ” ಎಂದು ಗಣ್ಯರು ಕಂಬನಿ ಮಿಡಿದಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!