ಅಡುಗೆ ಅನಿಲ ಕೊರತೆ, ಬೆಲೆ ಏರಿಕೆ: ಕೇಂದ್ರ ಸರ್ಕಾರ ವಿರುದ್ಧ ರಮಾನಾಥ ರೈ ಕಿಡಿ

ಮಂಗಳೂರು :ಕೇಂದ್ರ ಸರಕಾರದ ವೈಫಲ್ಯದಿಂದ ದೇಶದಲ್ಲಿ ಅಡುಗೆ ಅನಿಲ ಸರಿಯಾಗಿ ಪೂರೈಕೆಯಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎಂದು‌ ಮಾಜಿ ಸಚಿವ ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮಂಗಳೂರಿನಲ್ಲಿ‌ ಕಾಂಗ್ರೆಸ್ ಆಯೋಜಿಸಿದ್ದ ಅಡುಗೆ ಅನಿಲ ದರ ಏರಿಕೆ ವಿರುದ್ದದ ಪ್ರತಿಭಟನೆಯಲ್ಲಿ‌‌ ಪಾಲ್ಗೊಂಡು ಮಾತನಾಡಿದ ರೈ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ ನೀತಿಯೇ ಇದಕ್ಕೆ ಕಾರಣ ಎಂದು ಆರೋಪಿಸಿದರು.

ದೇಶದ ಆರ್ಥಿಕ ಪ್ರಸಕ್ತ ಪರಿಸ್ಥಿತಿ ಚೆನ್ನಾಗಿಲ್ಲ. ಬೆಲೆ ಏರಿಕೆಯಿಂದ ಜನರು ಕೂಡ ಕಂಗಾಲಾಗಿದ್ದಾರೆ. ಆದರೂ ಕೂಡ ಬಿಜೆಪಿಗರು ಸುಳ್ಳು ಹೇಳುತ್ತಾ ಜನರನ್ನು ತಪ್ಪು ದಾರಿಗೆ ತಳ್ಳುತಿದ್ದಾರೆ. ಹಾಗಾಗಿ ಇದನ್ನು ಜನಸಾಮಾನ್ಯರು ಅರ್ಥ ಮಾಡಿಕೊಳ್ಳಬೇಕು. ನಿರಂತರ ಬೆಲೆ ಏರಿಕೆಯಾಗುತ್ತಿದ್ದರೂ ಕೂಡ ಪ್ರಧಾನಿ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ರಮಾನಾಥ ರೈ ಹೇಳಿದರು.

ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜ ಮಾತನಾಡಿ ಅಡುಗೆ ಅನಿಲದ ಬೆಲೆಯು ಕಾಳಸಂತೆಯಲ್ಲಿ ನಾಲೈದು ಸಾವಿರ ರೂ.ಗೆ ಏರಿಕೆಯಾಗಿದೆ. ಪರಿಣಾಮ ಹೊಟೇಲ್‌ಗಳಲ್ಲಿ ತಿಂಡಿ ತಿನಿಸು, ಊಟದ ದರದಲ್ಲೂ ವಿಪರೀತ ಏರಿಕೆಯಾಗಿದೆ. ಆಟೊ ರಿಕ್ಷಾಗಳಿಗೆ ಎಲ್‌ಪಿಜಿ ಸಿಗದೆ ಚಾಲಕರು ಪರದಾಡುವಂತಾಗಿದೆ. ಇದಕ್ಕೆ ಬಿಜೆಪಿ, ಕೇಂದ್ರ ಸರಕಾರವೇ ಕಾರಣವಾಗಿದೆ. ನರೇಂದ್ರ ಮೋದಿ ದೇಶದ ಅತ್ಯಂತ ದುರ್ಬಲ ಪ್ರಧಾನಿ ಎಂಬುದನ್ನು ಈ ಮೂಲಕ ಸಾಬೀತುಪಡಿಸಿದ್ದಾರೆ ಎಂದು ಆರೋಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!