ಬಿಜೆಪಿ ಪ್ರಶಿಕ್ಷಣ ಮಹಾಭಿಯಾನ ಸಮಾಪ್ತಿ: ‘ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ’ – ನಳಿನ್ ಕುಮಾರ್ ಕಟೀಲ್

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಒಡ್ಡೂರು ಪಾರ್ಮ್ಸ್ ನಲ್ಲಿ ನಡೆದ ಎರಡು ದಿನಗಳ ಪಂ.ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ವರ್ಗವು ಯಶಸ್ವಿಯಾಗಿ ಸಮಾಪ್ತಿಗೊಂಡಿತು.

ಸಮಾರೋಪ ಸಮಾರಂಭದಲ್ಲಿ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರು, ಅಭ್ಯಾಸ ವರ್ಗ, ಕಾರ್ಯಕಾರಿಣಿ ಸಭೆ, ಪದಾಧಿಕಾರಿಗಳ ಸಭೆ, ಪ್ರಶಿಕ್ಷಣ, ಹೀಗೆ ನಿರಂತರ ಕಾರ್ಯ ಚಟುವಟಿಕೆಗಳೇ ಬಿಜೆಪಿ ಜಗತ್ತಿನ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆಯಲು ಕಾರಣ. ವ್ಯಕ್ತಿಗಿಂತ ಪಕ್ಷ,ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಸಿದ್ಧಾಂತದ ಭಾರತೀಯ ಜನತಾ ಪಾರ್ಟಿಯು ಪ್ರತಿಯೊಬ್ಬ ಕಾರ್ಯಕರ್ತರನ್ನು ಗುರುತಿಸಿ ಜವಾಬ್ದಾರಿ ನೀಡಿ ರಾಷ್ಟ್ರ ಕಾರ್ಯಕ್ಕೆ ಅಣಿಯಾಗಿಸುತ್ತದೆ. ಭಾರತವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದೇ ನಮ್ಮೆಲ್ಲರ ಗುರಿಯಾಗಿದ್ದು, ಆ ನಿಟ್ಟಿನಲ್ಲಿ ಜೊತೆಯಾಗಿ ಸಾಗೋಣ ಎಂದು ಕರೆ ನೀಡಿದರು.

ಶಾಸಕರುಗಳಾದ ಡಿ.ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಹಾಗೂ ಲಲ್ಲೇಶ್ ಕುಮಾರ್, ಜಿಲ್ಲಾ ಪದಾಧಿಕಾರಿಗಳು, ನಿಕಟ ಪೂರ್ವ ಮನಪಾ ಸದಸ್ಯರು, ಮಂಡಲ ಪದಾಧಿಕಾರಿಗಳು, ಜಿಲ್ಲೆ ಮತ್ತು ಮಂಡಲದ ಮೋರ್ಚಾದ ಪದಾಧಿಕಾರಿಗಳು, ಪ್ರಕೋಷ್ಠದ ಪ್ರಮುಖರು, ಮಹಾಶಕ್ತಿ ಕೇಂದ್ರದ ಪ್ರಮುಖರು, ಶಕ್ತಿಕೇಂದ್ರದ ಪ್ರಮುಖರು, ಬೂತ್ ಪ್ರಮುಖರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!