ಮಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಟ ಸಾರ್ವಭೌಮ ಡಾ. ರಾಜ್‌ಕುಮಾರ್ ಅವರ ಹೆಸರಿನಲ್ಲಿ ನಿರ್ಮಾಣಗೊಂಡಿರುವ “ಡಾ. ರಾಜ್ ಸೇವಿನೆನಪು ಹುಟ್ಟಿದರೆ ಕನ್ನಡ ನಾಡಲ್ ಹುಟ್ಟಬೇಕು ಸಂಗೀತ ಸುಧೆ 2026” ಕಾರ್ಯಕ್ರಮವು ಮೇ 10ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಡಾ ರಾಜ್ ಕುಮಾರ್ ಅಭಿಮಾನಿಗಳ ವೇದಿಕೆಯ ಅಧ್ಯಕ್ಷರು ನಾಗೇಂದ್ರ ಎನ್ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ. “ಆಮಂತ್ರಣ ಪತ್ರಿಕೆ” ಮೂಲಕ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿದ್ದು, ಕನ್ನಡಾಭಿಮಾನಿಗಳಿಗಾಗಿ ವಿಶೇಷ ಸಂಗೀತ ರಸಮಂಜಲಿ ಆಯೋಜಿಸಲಾಗಿದೆ. ಕಾರ್ಯಕ್ರಮದ ಮುಖ್ಯ ಪ್ರಾಯೋಜಕವನ್ನು ಎಸ್ ಎಲ್ ಶೇಟ್ ಡೈಮಂಡ್ ಹೌಸ್ ಇವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿವಿಧ ಸಂಘ ಸಂಸ್ಥೆಗಳ ಗಣ್ಯರು ಹಾಗೂ ಸಮಾಜಮುಖಿ ವ್ಯಕ್ತಿತ್ವಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಡಾ. ರಾಜ್‌ಕುಮಾರ್ ಅಭಿನಯದ ಅಮರ ಗೀತೆಗಳನ್ನು ಖ್ಯಾತ ಗಾಯಕರು ಮತ್ತು ಕಲಾವಿದರು ಹಾಡದ್ದಾರೆ. ಕನ್ನಡ ನಾಡು-ನುಡಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ವಿಶಿಷ್ಟ ವೇದಿಕೆಯಾಗಲಿದೆ. ಈ ಸಂಗೀತ ಕಾರ್ಯಕ್ರಮಕ್ಕೆ ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.