ಬಂಟ್ವಾಳ : ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗಂಡ ಹೆಂಡತಿ ಇಬ್ಬರ ಮೃತದೇಹ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಇಂದು ಗುರುವಾರ ಪತ್ತೆಯಾಗಿದೆ.
ಸಜಿಪಮೂಡ ಗ್ರಾಮದ ತಿಮ್ಮಪ್ಪ ಮೂಲ್ಯ (50)ಹಾಗೂ ಆತನ ಪತ್ನಿ ತುಂಬು ಗರ್ಭಿಣಿ ಜಯಂತಿ (40) ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.


ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ದರೆ ತಿಮ್ಮಪ್ಪ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ
ಕಂಡು ಬಂದಿದೆ.


ಪತ್ನಿಯ ಕುತ್ತಿಗೆ ಹಿಸುಕಿದ ರೀತಿಯಲ್ಲಿ ಕಂಡುಬಂದಿದೆ ಎನ್ನಲಾಗಿದ್ದು, ಮೇಲ್ನೋಟಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೋಲೀಸರು ವ್ಯಕ್ತಪಡಿಸಿದ್ದಾರೆ.
15 ವರ್ಷಗಳ ಹಿಂದೆ ಮದುವೆಯಾಗಿದ್ದ ಇವರಿಗೆ ಮಕ್ಕಳಾಗಿರಲಿಲ್ಲ. ಜಯಂತಿ ಅವರು ಇದೀಗ ಗರ್ಭಿಣಿಯಾಗಿದ್ದು, ಜುಲೈ 2 ರಂದು ಸೀಮಂತ ದಿನ ನಿಗದಿಯಾಗಿತ್ತು.ಆದರೆ ಈ ನಡುವೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಟುಂಬ ವರ್ಗವನ್ನು ದುಖಃತಪ್ತಗೊಳಿಸಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.ಬಂಟ್ವಾಳ ಗ್ರಾಮಾಂತರ ಪೋಲೀಸ್ ನಿರೀಕ್ಷಕ ಶಿವಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!