ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸಿದ ಆರೋಪಿತೆಯನ್ನು ಬಂಧಿಸಿ 35,00,000/- ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಂಗಳೂರು ನಗರದ ಮುಲ್ಕಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಿನ್ನೆ ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆ ಶಿವಮೊಗ್ಗದ ಸುಹಾನ ಎಂಬಾಕೆಯನ್ನು ವಶಕ್ಕೆ ಪಡೆದು ಅವಳ ಬಳಿ ಇದ್ದ ಸುಮಾರು 35,00,000ಮೌಲ್ಯದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೊವಿಡ್ ಗಾಂಜಾ ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಮತ್ತು ಇತರ ಸೊತ್ತು ವಶಪಡಿಸಿಕೊಳ್ಳಲಾಗಿದೆ. ಈಕೆ ಹಾಲಿ ಕುಂದಾಪುರ ಕಾಲೇಜಿನ ಅಂತಿಮ ವರ್ಷದ BCA ವಿದ್ಯಾರ್ಥಿನಿ.
ಮಾದಕ ವಸ್ತುವನ್ನು ಆರೋಪಿತೆಯು ಚೆನ್ನೈ ನಿಂದ ತರಿಸಿ ಕೊಂಡು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶದಿಂದ ತಂದಿರುವುದಾಗಿ ತಿಳಿದು ಬಂದಿದೆ. ಆರೋಪಿತೆಯ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2026 ಕಲಂ: 8(ಸಿ), 20(ಬಿ) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಣಂಬೂರು ACP ತಂಡ ಹಾಗೂ ಮೂಲ್ಕಿ ಠಾಣೆಯ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿತೆಯ ವಿರುದ್ಧ ಕಾವೂರು ಪೊಲೀಸ್ ಠಾಣಾ ಅ. ಕ್ರ 37/2026 ಕಲಂ: 8(C), 22(C) NDPS Act ಹಾಗೂ
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಕಸ್ಟಮ್ O. R No: 177/2025-26 U/S 20(b), 2(B), 23(b), 27(A) & 29 NDPS Act ನಡಿಯಲ್ಲಿ ಪ್ರಕರಣ ದಾಖಲಾಗಿದೆ.