ಇ-ಆಟೋ ರಿಕ್ಷಾ ಪರವಾನಿಗೆಗೆ ಅರ್ಜಿ ಸಲ್ಲಿಸಲು ಸಾರಿಗೆ ಇಲಾಖೆ ಸೂಚನೆ

ಮಂಗಳೂರು: ಮಂಗಳೂರು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ (ಕೆಎ-19) ವ್ಯಾಪ್ತಿಯಲ್ಲಿ ನೋಂದಣಿಗೊಂಡಿರುವ ಒಟ್ಟು 3,551 ಇಲೆಕ್ಟ್ರಿಕ್ ಆಟೋ ರಿಕ್ಷಾಗಳ ಪೈಕಿ 2,162 ವಾಹನಗಳಿಗೆ ಮಾತ್ರ ಪರವಾನಿಗೆಗಾಗಿ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಇಲಾಖೆ ತಿಳಿಸಿದೆ.ಇನ್ನೂ 1,389 ಇಲೆಕ್ಟ್ರಿಕ್ ಆಟೋ ರಿಕ್ಷಾ ಮಾಲಕರು ಪರವಾನಿಗೆ ಪಡೆಯಲು ಅರ್ಜಿ ಸಲ್ಲಿಸಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪರವಾನಿಗೆಗೆ ಅರ್ಜಿ ಸಲ್ಲಿಸಲು ಬಾಕಿ ಉಳಿದಿರುವ ವಾಹನ ಮಾಲಕರು ತಕ್ಷಣ ಅರ್ಜಿ ಸಲ್ಲಿಸಬೇಕು. ಇನ್ನಷ್ಟು ವಿಳಂಬ ಮಾಡಿದಲ್ಲಿ ಮೋಟಾರು ವಾಹನ ನಿಯಮಾವಳಿಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಉಪಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ (ಪ್ರಭಾರ) ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!