ಮಂಗಳೂರು ವಿವಿಯಲ್ಲಿ ‘ಸಂಭ್ರಮ-2026’ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ‘ಸಂಭ್ರಮ-2026’ ಸಾಂಸ್ಕೃತಿಕ ಸ್ಪರ್ಧೆಗೆ ಮಂಗಳವಾರ ಮಂಗಳ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಸಿನಿಮಾ ಹಾಗೂ ನಾಟಕ ಕಲಾವಿದ ಸತೀಶ್ ಬಂದಲೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಾಗಿರುವುದು ಹೆಮ್ಮೆಯ ಸಂಗತಿ. ಸಾಂಸ್ಕೃತಿಕ ಕಾರ್ಯಕ್ರಮಗಳು ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಜೀವನದ ಬೆಳವಣಿಗೆಗೆ ಪೂರಕವಾಗುತ್ತವೆ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿವಿ ಕುಲಪತಿ ಪ್ರೊ. ಪಿ.ಎಲ್. ಧರ್ಮ ಮಾತನಾಡಿ, ತುಳು ಸಿನಿಮಾ ಮತ್ತು ನಾಟಕಗಳು ಕೇವಲ ಮನರಂಜನೆಗಾಗಿ ಮಾತ್ರವಲ್ಲ, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಮಾಧ್ಯಮಗಳಾಗಿವೆ. ವಿದ್ಯಾರ್ಥಿಗಳು ಇಂತಹ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಯಶ್ವಿನ್ ಕೆ.ಪಿ., ಅಪೇಕ್ಷಾ ಎಚ್. ಆಳ್ವ, ನಿಹಾರ್ ಗಾಂವ್ಕರ್, ಮಿಲನ್ ಮುತ್ತಣ್ಣ, ಶ್ರೀಶ್ ಕೆ. ಹಾಗೂ ಕೇಸರಿ ಉಪಸ್ಥಿತರಿದ್ದರು.

ಈ ವೇಳೆ ನಾಟಕ ಕಲಾವಿದ ಸತೀಶ್ ಬಂದಲೆ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕ ಡಾ. ಮೋಹನ್ ಸಿಂಘೆ ಸ್ವಾಗತಿಸಿದರು. ಸಾಂಸ್ಕೃತಿಕ ಜೊತೆ ಕಾರ್ಯದರ್ಶಿ ಕೇಸರಿ ವಂದಿಸಿದರು. ಸಂಶೋಧನಾ ವಿದ್ಯಾರ್ಥಿನಿ ಕಾವ್ಯ ಕಾರ್ಯಕ್ರಮ ನಿರೂಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!