ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ; ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆಗ್ರಹ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಕದ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್, ದೇಶದ ಅತ್ಯಂತ ಮಹತ್ವದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೊಂದಾದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ದೊಡ್ಡ ಹೊಡೆತವಾಗಿದೆ ಎಂದು ಆರೋಪಿಸಿದರು. ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕ ಹಾಗೂ ವಿಶ್ವಾಸಾರ್ಹವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.

ಈ ಹಗರಣದ ಹಿಂದೆ ಬಿಜೆಪಿ ಯುವ ಮೋರ್ಚಾದ ಸದಸ್ಯರ ಜಾಲ ಕಾರ್ಯನಿರ್ವಹಿಸುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಹೀಗಾಗಿ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸ್ವತಂತ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಜಿಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರಾದ ಅಪ್ಪಿ, ಲಾರೆನ್ಸ್ ಡಿ’ಸೋಜಾ, ಸುಹಾನ್ ಆಳ್ವ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಸುಹೈಲ್ ಕಂದಕ್, ಅಭಿನಂದ್ ಹರೀಶ್, ಬಶೀರ್, ನವಾಝ್ ನರಿಂಗಾನ, ಹಾಶೀರ್ ಪೆರಿಮಾರ್, ಫೈಝಲ್, ಗೋಪಿನಾಥ್, ಹಕೀಂ, ಪೃಥ್ವಿರಾಜ್, ಮಿಥೇಶ್, ರಿತೇಶ್ ಅಂಚನ್, ಸುಮಂತ್, ಫಯಾಝ್ ಅಮ್ಮೆಮ್ಮಾರ್, ಚಂದ್ರಕಲಾ ಜೋಗಿ, ಸಾರಿಕ ಪೂಜಾರಿ ಹಾಗೂ ಹಲವರು ಭಾಗವಹಿಸಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!