ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಇಬ್ಬರು ಹಿಡಿತ

ಮಂಗಳೂರು: ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.ಭಜರಂಗದಳ ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ರಕ್‌ನ್ನು ತಡೆದು ಪರಿಶೀಲನೆ ನಡೆಸಿದರು.

ಈ ವೇಳೆ ಟ್ರಕ್‌ನಲ್ಲಿ 27 ಜಾನುವಾರುಗಳನ್ನು ಅಮಾನುಷವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಹಾವೇರಿಯಿಂದ ಮಂಗಳೂರು ಮಾರ್ಗವಾಗಿ ಕೇರಳಕ್ಕೆ ಜಾನುವಾರುಗಳನ್ನು ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!