ಮಂಗಳೂರು: ನಗರದ ಬಂಗ್ರ ಕೂಳೂರು ದಂಬೆಲ್ ಪ್ರದೇಶದಲ್ಲಿ ವಾಸಿಸುತ್ತಿದ್ದ ತಾಯಿ ಹಾಗೂ ಮಗ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಳ್ಳಾರಿ ಮೂಲದ ರಕ್ಷಿತಾ ಎಂ (21) ಅವರು ಮೇ 9ರಂದು ತಮ್ಮ ಒಂದು ವರ್ಷದ ಮಗ ಆದರ್ಶ್ನೊಂದಿಗೆ ಮನೆಯಿಂದ ಹೊರಟು ಹೋದವರು ಇದುವರೆಗೆ ವಾಪಸು ಬಾರದ ಹಿನ್ನೆಲೆಯಲ್ಲಿ ಕಾಣೆಯಾಗಿದ್ದಾರೆ.
ಕಾಣೆಯಾದ ರಕ್ಷಿತಾ ಅವರ ಚಹರೆ: ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ ಹೊಂದಿದ್ದು, ಬಲ ಕೈಯಲ್ಲಿ ‘ಎ’ ಅಕ್ಷರದ ಹಚ್ಚೆ ಗುರುತು ಇದೆ. ಅವರು ಲಂಬಾಣಿ ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆಗೆ ಅಥವಾ ಕಾವೂರು ಪೊಲೀಸ್ ಠಾಣೆಗೆ ಸಂಪರ್ಕಿಸಲು ಠಾಣಾಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.