ಬಕ್ರೀದ್ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ ಮನವಿ

ಮಂಬರಲಿರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ ಬಲಿ(ಕುರ್ಬಾನಿ) ನಡೆಯುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಜಾನುವಾರು ಸಾಗಾಟ ನಿಯಮಾವಳಿ 2021 ಅನ್ವಯ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಪುತ್ತೂರು ಗ್ರಾಮಾಂತರ ವತಿಯಿಂದ ವತಿಯಿಂದ ಇಂದು ಪುತ್ತೂರು ಗ್ರಾಮಾಂತರ ಪೋಲಿಸ್ ಠಾಣೆಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‌ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ,ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಕೇಶವಪ್ರಸಾದ್ ಬಜಪ್ಪಳ , ವಿಶ್ವ ಹಿಂದೂ ಪರಿಷದ್ ಗ್ರಾಮಾಂತರ ಪ್ರಖಂಡ ಅಧ್ಯಕ್ಷರು ಜಯಂತ್ ಶೆಟ್ಟಿ ಕಂಬಳತ್ತಡ್ಡ, ನಗರ ಪ್ರಖಂಡದ ಬಜರಂಗದಳ ಸಪ್ತಾಯಿಕ್ ಮಿಲನ್ ಪ್ರಮುಖ್ ಸಂದೀಪ್ ಸಿಂಗಣಿ, ತಿಂಗಳಾಡಿ ಘಟಕದ ಬಜರಂಗದಳ ಸಂಯೋಜಕ್ ಜಗದೀಶ್ ತಿಂಗಳಾಡಿ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!