7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ. ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರಂ, ಬಂಧಿತ ವ್ಯಕ್ತಿ.
ಉಪ್ಪಿನಂಗಡಿ ಠಾಣಾ ಅಕ್ರ:158/2015 ಕಲಂ:457, 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಕ್ರಂನನ್ನು ನಿನ್ನೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿಎಸ್ ಐ ಕೌಶಿಕ್ ಬಿಸಿ, ಸಿಬ್ಬಂದಿಯವರಾದ ಶಿವರಾಮ್ ರೈ, ಮಹದೇವ ರವರು ಮಂಗಳೂರಿನ ಪಣಂಬೂರಿನಲ್ಲಿ ದಸ್ತಗಿರಿ ಮಾಡಿ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಮತ್ತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.