ಕದ್ರಿಗುಡ್ಡೆಯಲ್ಲಿ ₹30 ಲಕ್ಷ ರಸ್ತೆ ಅಭಿವೃದ್ಧಿಗೆ ಚಾಲನೆ

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆಯ 30ನೇ ಕೊಡಿಯಾಲ್‌ಬೈಲ್ ವಾರ್ಡಿನ ಕದ್ರಿಗುಡ್ಡೆ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆಯಿಂದ ₹30 ಲಕ್ಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿತು.

ಬಳಿಕ ಮಾತನಾಡಿದ ಶಾಸಕರು, ರಸ್ತೆ ಅಭಿವೃದ್ಧಿಯ ಅಗತ್ಯತೆ ಕುರಿತು ಸ್ಥಳೀಯ ನಿಕಟ ಪೂರ್ವ ಪಾಲಿಕೆ ಸದಸ್ಯರು ಹಾಗೂ ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ನಿರಂತರವಾಗಿ ಪ್ರಯತ್ನಿಸಿದ್ದರು. ಇದೀಗ ಅಗತ್ಯ ಅನುದಾನವನ್ನು ಒದಗಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಇದರಿಂದ ಸ್ಥಳೀಯ ನಿವಾಸಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಮನೋಹರ್ ಶೆಟ್ಟಿ ಕದ್ರಿ, ಬೂತ್ ಅಧ್ಯಕ್ಷರಾದ ಸದಾಶಿವ, ಪ್ರವೀಣ್ ಭಟ್, ಜೀವನ್, ಜಯರಾಜ್ ಶೆಟ್ಟಿ, ವಾಸುದೇವ, ದೇವರಾಣಿ, ಕದ್ರಿ ಜಗದೀಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!