ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪರಾಷ್ಟ್ರಪತಿ ಭೇಟಿ; ವಿಶೇಷ ಪೂಜೆ ಸಲ್ಲಿಕೆ

ದೇಶದ ಉಪರಾಷ್ಟ್ರಪತಿ ಪಿ.ರಾಧಾಕೃಷ್ಣನ್ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯ ಪ್ರವೇಶಿಸಿದ ಉಪ ರಾಷ್ಟ್ರಪತಿ ಬಳಿಕ ಕ್ಷೇತ್ರದ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿದರು.

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.
ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದ ಉಪ ರಾಷ್ಟ್ರಪತಿ, ಕ್ಷೇತ್ರದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಸೇವಾ ಕಾರ್ಯಗಳನ್ನು ಶ್ಲಾಘಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!