ಪುತ್ತೂರು:ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೂರ್ನಡ್ಕ, ಮರೀಲ್ ಎಂಬಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ಘನ ವಾಹನಗಳನ್ನು ಪಾರ್ಕಿಂಗ್ ಮಾಡಿದ್ದು ಇದರಿಂದಾಗಿ ಶಾಲಾ ಮಕ್ಕಳು ತೀವ್ರ ತೊಂದರೆ ಎದುರಿಸುವಂತಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ.
ರಸ್ತೆಯ ಇಕ್ಕೆಲಗಳಲ್ಲಿ ಲಾರಿ, ಪಿಕಪ್ ಮೊದಲಾದ ವಾಹನಗಳನ್ನು ನಿಲ್ಲಿಸಲಾಗಿದ್ದು ಇದರಿಂದಾಗಿ ಅಲ್ಲಿ ನಡೆದುಕೊಂಡು ಹೋಗಲು ತೊಂದರೆಯುಂಟಾಗಿದ್ದು ಶಾಲೆಗೆ ಹೋಗುವ ಮಕ್ಕಳಿಗಂತೂ ತುಂಬಾ ಸಮಸ್ಯೆ ಉಂಟಾಗಿದೆ ಎಂದು ವಿದ್ಯಾರ್ಥಿಗಳ ಪೋಷಕರು ಆರೋಪಿಸಿದ್ದು, ಸಂಬಂಧಪಟ್ಟವರು ಕೂಡಲೇ ಇತ್ತ ಗಮನಹರಿಸಿ ಸಮಸ್ಯೆ ಬಗೆಹರಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.